- Advertisement -
![]()
- Advertisement -
ಮಂಗಳೂರು ಜೂನ್ 10: ದಕ್ಷಿಣಕನ್ನಡ ಜಿಲ್ಲೆಯಲ್ಲಿ 4 ಕೊರೊನಾ ಪ್ರಕರಣ ದೃಡಪಟ್ಟಿದ್ದು, ಉಡುಪಿ ಜಿಲ್ಲೆಯಲ್ಲಿ ಇಂದೂ ಕೂಡ ಯಾವುದೇ ಕೊರೊನಾ ಪ್ರಕರಣ ದಾಖಲಾಗಿಲ್ಲ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಪತ್ತೆಯಾದ 4 ಪ್ರಕರಣಗಳಲ್ಲಿ ಎರಡು ಪ್ರಕರಣ ದುಬೈಯಿಂದ ಆಗಮಿಸಿದವರಾಗಿದ್ದು ಮತ್ತೆ 2 ಪ್ರಕರಣ ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದವರಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 214ಕ್ಕೆ ಏರಿಕೆಯಾಗಿದೆ.
ಇನ್ನು ಉಡುಪಿ ಜಿಲ್ಲೆಯಲ್ಲಿ ಸತತ ಎರಡನೇ ದಿನ ಯಾವುದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ಇಂದು ಉಡುಪಿ ಜಿಲ್ಲೆಯಲ್ಲಿ 93 ಮಂದಿ ಕೊರೊನಾ ಸೊಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
- Advertisement -


