Sunday, April 28, 2024
Homeಕರಾವಳಿಉಡುಪಿರಾಜ್ಯದಲ್ಲಿ ತ್ರಿಶತಕ ಭಾರಿಸಿದ ಕೊರೋನಾ: ದಕ್ಷಿಣ ಕನ್ನಡ 30, ಉಡುಪಿಯಲ್ಲಿ 14 ಹೊಸ ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ತ್ರಿಶತಕ ಭಾರಿಸಿದ ಕೊರೋನಾ: ದಕ್ಷಿಣ ಕನ್ನಡ 30, ಉಡುಪಿಯಲ್ಲಿ 14 ಹೊಸ ಪ್ರಕರಣಗಳು ಪತ್ತೆ

spot_img
- Advertisement -
- Advertisement -

ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೋನಾ ಮಹಾಮಾರಿ ತ್ರಿಶತಕ ಬಾರಿಸಿದ್ದು, ಒಂದೇ ದಿನ 308 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 6,824ಕ್ಕೆ ಏರಿಕೆಯಾಗಿದೆ. ಇನ್ನು ಮೂವರು ಕೊರೋನಾಗೆ ಬಲಿಯಾಗಿದ್ದಾರೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲಿ 30 ಮತ್ತು ಉಡುಪಿಯಲ್ಲಿ 14 ಹೊಸ ಪ್ರಕರಣಗಳು ಪತ್ತೆಯಾಗಿದೆ

ಕಲಬುರ್ಗಿಯಲ್ಲಿ 67, ಯಾದಗಿರಿ 52, ಬೀದರ್ 42, ಬೆಂಗಳೂರು ನಗರ 31, ದಕ್ಷಿಣಕನ್ನಡ 30, ಧಾರವಾಡ 20, ಉಡುಪಿ 14, ಹಾಸನ 11, ಬಳ್ಳಾರಿ 11, ವಿಜಯಪುರ 6, ರಾಯಚೂರು, ಉತ್ತರಕನ್ನಡ ತಲಾ 5, ಕೋಲಾರ 4, ದಾವಣಗೆರೆ 3, ಮಂಡ್ಯ, ಹಾವೇರಿ ತಲಾ 2, ಮೈಸೂರು, ಬಾಗಲಕೋಟೆ, ರಾಮನಗರ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ.

ಉಡುಪಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1005 ಕ್ಕೆ ಏರಿಕೆಯಾಗಿದ್ದು, 584 ಮಂದಿ ಬಿಡುಗಡೆಯಾಗಿ ಒಬ್ಬರು ಮೃತಪಟ್ಟಿದ್ದಾರೆ.

ಕಲಬುರ್ಗಿಯಲ್ಲಿ 883 ಒಟ್ಟು ಸೋಂಕಿತರ ಸಂಖ್ಯೆಯಲ್ಲಿ 377 ಮಂದಿ ಬಿಡುಗಡೆಯಾಗಿ 10 ಮಂದಿ ಮೃತಪಟ್ಟಿದ್ದಾರೆ.

ಯಾದಗಿರಿಯಲ್ಲಿ 787 ಮಂದಿಗೆ 237 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರು ನಗರದಲ್ಲಿ 648 299 ಮಂದಿ ಬಿಡುಗಡೆಯಾಗಿ 29 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ 6,824 ಪ್ರಕರಣಗಳ ಪೈಕಿ 3,648 ಮಂದಿ ಗುಣಮುಖರಾಗಿದ್ದಾರೆ. ಇನ್ನು 3,092 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -
spot_img

Latest News

error: Content is protected !!