ಮಂಗಳೂರು: ಕೊರೊನ ಅಟ್ಟಹಾಸ ಕರಾವಳಿಯನ್ನು ಬೆಚ್ಚಿ ಬೀಳಿಸಿದೆ. ಇಂದು ದ.ಕ 79, ಉಡುಪಿ 7 ಮಂದಿಗೆ ಸೋಂಕು ದೃಢ ಪಟ್ಟಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 79 ಮಂದಿಗೆ ಸೋಂಕು ತಾಗಿರುವುದು ದೃಢವಾಗಿದೆ. ಪುತ್ತೂರು ಹಿರೇಂಬಾಡಿಯ 25 ವರ್ಷದ ಕಾರ್ಮಿಕನೋರ್ವನಿಗೆ ಸೋಂಕು ತಾಗಿರುವುದು ದೃಢವಾಗಿದೆ.
ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಪಟ್ಟಿ ಬೆಳೆಯುತ್ತಲೇ ಇದೆ. ಇಂದು ಜಿಲ್ಲೆಯಲ್ಲಿ ಮತ್ತೆ 7 ಜನರಿಗೆ ಸೋಂಕು ದೃಢವಾಗಿದೆ. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1035ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ317 ಮಂದಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 7530 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಂದು ಸೋಂಕಿನ ಕಾರಣದಿಂದ 7 ಮಂದಿ ಸಾವನ್ನಪ್ಪಿದ್ದಾರೆ.322 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 2976 ಸಕ್ರಿಯ ಸೋಂಕು ಪ್ರಕರಣಗಳಿವೆ.
ದಕ್ಷಿಣಕನ್ನಡ 79, ಕಲಬುರ್ಗಿ 63, ಬಳ್ಳಾರಿ 53 ,ಬೆಂಗಳೂರು ನಗರ 47 ಪ್ರಕರಣಗಳು ದೃಢಪಟ್ಟಿವೆ.