- Advertisement -
- Advertisement -
ನವದೆಹಲಿ : ದೇಶದಲ್ಲಿ ಕೊರೊನಾ ಆರ್ಭಟ ದಿನದಿಂದ ಹೆಚ್ಚುತ್ತಲೇ ಇದೆ . ಒಂದೇ ದಿನ 7,466 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಭಾರತದಲ್ಲಿ ಸೋಂಕಿತರ ಸಂಖ್ಯೆ 1.65 ಲಕ್ಷಕ್ಕೆ ಏರಿಕೆ ಆಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಮಾಹಿತಿ ನೀಡಿದೆ.
4ನೇ ಹಂತದ ಲಾಕ್’ಡೌನ್ ತೆರವಿಗೆ ದೇಶ ಸಜ್ಜಾಗಿರುವ ಹೊತ್ತಿನಲ್ಲೇ ದಾಖಲೆಯ ಪ್ರಮಾಣದಲ್ಲಿ ಹೊಸ ಸೋಂಕಿತ ಪ್ರಕರಣಗಳು ಬೆಳಕಿಗೆ ಬಂದಿದೆ. ಕಳೆದ 24 ಗಂಟೆಗಳಲ್ಲಿ 7,466 ಮಂದಿಯಲ್ಲಿ ಸೋಂಕು ಪತ್ತೆಯಾಗಿರುವುದು ಒಂದು ದಿನದಲ್ಲಿ ದಾಖಲಾದ ಗರಿಷ್ಠ ಸಂಖ್ಯೆಯಾಗಿದೆ. ಇದರಿಂದಾಗಿ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,65,799ಕ್ಕೆ ಏರಿಕೆಯಾಗಿದೆ.
- Advertisement -