Thursday, June 25, 2026
Homeತಾಜಾ ಸುದ್ದಿಮಹಾರಾಷ್ಟ್ರದಲ್ಲಿ ಕೊರೊನಾ ರಣಕೇಕೆ : ಒಂದೇ ದಿನ ಮಹಾಮಾರಿಗೆ 48 ಬಲಿ!

ಮಹಾರಾಷ್ಟ್ರದಲ್ಲಿ ಕೊರೊನಾ ರಣಕೇಕೆ : ಒಂದೇ ದಿನ ಮಹಾಮಾರಿಗೆ 48 ಬಲಿ!

- Advertisement -
- Advertisement -

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಒಂದೇ ದಿನ 48 ಜನರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. 1,165 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 20 ಸಾವಿರದ ಗಡಿ ದಾಟಿದ್ದು, 779 ಮಂದಿ ಕೊರೊನಾ ವೈರಸ್ ಗೆ ಮೃಟಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಶನಿವಾರ ಒಂದೇ ದಿನ ಮಹಾರಾಷ್ಟ್ರದಲ್ಲಿ 48 ಜನರು ಮೃತಪಟ್ಟಿದ್ದು, ಈ ಪೈಕಿ 27 ಜನರು ಮುಂಬೈನಲ್ಲಿ ಸಾವನ್ನಪ್ಪಿದ್ದಾರೆ. 9 ಮಂದಿ ಪುಣೆ, 8 ಮಂದಿ ಮಲೆಗಾನ್ ನಲ್ಲಿ ಸಾವನ್ನಪ್ಪಿದ್ದಾರೆ. ಕೊರೊನಾಗೆ ಮುಂಬೈ ನಗರ ನಲುಗಿ ಹೋಗಿದ್ದು, ಸೋಂಕಿತರ ಪ್ರಮಾಣ 12,864 ಕ್ಕೆ ಏರಿಕೆಯಾಗಿದ್ದು, ಮಹಾಮಾರಿಗೆ ಈವರೆಗೆ 489 ಜನರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

- Advertisement -

Latest News

error: Content is protected !!