Sunday, May 5, 2024
Homeಕರಾವಳಿದಕ್ಷಿಣಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗ್ತಿದೆ ಕೊರೊನಾ ಆರ್ಭಟ: ಕಾಸರಗೋಡಿನಿಂದ ಬರೋರಿಗೆ ಕೋವಿಡ್ ನೆಗೆಟಿವ್ ವರದಿ ಇಲ್ಲ...

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗ್ತಿದೆ ಕೊರೊನಾ ಆರ್ಭಟ: ಕಾಸರಗೋಡಿನಿಂದ ಬರೋರಿಗೆ ಕೋವಿಡ್ ನೆಗೆಟಿವ್ ವರದಿ ಇಲ್ಲ ಅಂದ್ರೆ ಜಿಲ್ಲೆಗೆ ನೋ ಎಂಟ್ರಿ

spot_img
- Advertisement -
- Advertisement -

ಮಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಆರ್ಭಟ ಜೋರಾಗಿದೆ. ಹಾಗಾಗಿ ರಾಜ್ಯದ ಎಲ್ಲಾ ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲು ರಾಜ್ಯ ಸರಕಾರ ನಿರ್ಧರಿಸಿದ್ದು, ಇನ್ನು ದಕ್ಷಿಣಕನ್ನಡ ಜಿಲ್ಲೆಗೆ ತಲಪಾಡಿ ಗಡಿ ಮೂಲಕ ಆಗಮಿಸುವವರ ಸಂಖ್ಯೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಪ್ರವೇಶಿಸುವ ಕಾಸರಗೋಡು ಜಿಲ್ಲೆಯವರು ಹಾಗೂ ಕೇರಳದ ಇತರ ಜಿಲ್ಲೆಯವರು ಕೋವಿಡ್ ನೆಗೆಟಿವ್ ವರದಿ ಹೊಂದಿರಬೇಕೆಂದು ಜಿಲ್ಲಾಡಳಿತ ಆದೇಶಿಸಿದೆ.


ಗಡಿ ಭಾಗದ ಜನತೆಗೆ ತೊಂದರೆಯಾಗುತ್ತದೆ ಎನ್ನುವ ಕಾರಣದಿಂದಾಗಿ ಕಳೆದ ತಿಂಗಳು ಜಾರಿಗೆ ತಂದಿದ್ದ ಕಡ್ಡಾಯ ನೆಟಿವ್ ವರದಿ ಹೊಂದಿರುವ ಆದೇಶವನ್ನು ಮುಂದೂಡಲಾಗಿತ್ತು. ಅಲ್ಲದೆ, ಪ್ರತಿಯೊಬ್ಬರು ಜಿಲ್ಲೆಗೆ ಆಗಮಿಸುವವರು ನೆಗೆಟಿವ್ ವರದಿ ಹೊಂದಿರಬೇಕೆಂದು ಆದೇಶ ನೀಡಿದ್ದರು. ಇದೀಗ ಎರಡು ವಾರಗಳ ಕಾಲಾವಕಾಶ ನೀಡಿದ ಬಳಿಕ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. 

ಕೇರಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿಯಮವನ್ನು ಮತ್ತೆ ಜಾರಿಗೆ ತರಲಾಗಿದೆ. ಶುಕ್ರವಾರದಂದು ಕೋವಿಡ್ ನೆಗೆಟಿವ್ ವರದಿ ಪರೀಕ್ಷಿಸುವ ಸಂದರ್ಭದಲ್ಲಿ ಗಡಿಭಾಗದ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆ ಶುಕ್ರವಾರದಂದು ವಿನಾಯಿತಿ ನೀಡಲಾಗಿತ್ತು. ಆದರೆ, ಶನಿವಾರದಿಂದ ಕಟ್ಟುನಿಟ್ಟಾಗಿ ನಿಯಮ ಜಾರಿಗೆ ತರಲಾಗುವುದೆಂದು ಆರೋಗ್ಯಾಧಿಕಾರಿ ಹಾಗೂ ದ.ಕ. ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.

- Advertisement -
spot_img

Latest News

error: Content is protected !!