- Advertisement -
- Advertisement -
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ಈವರೆಗೆ 534 ಜನರಿಗೆ ಕೊರೋನಾ ಸೋಂಕು ತಗುಲಿದೆ. 21 ಮಂದಿ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ. ಸೋಂಕಿತರ ಸಂಪರ್ಕದಲ್ಲಿರುವವರನ್ನು ಕ್ವಾರೆಂಟೈನ್ ನಲ್ಲಿಡುವುದು ನಿಯಮ. ಹೀಗಾಗಿ ಕೊರೊನಾ ಸೋಂಕಿತ ಮಾಧ್ಯಮ ಸಿಬ್ಬಂದಿಯ ಸಂಪರ್ಕಕ್ಕೆ ಬಂದಿದ್ದ ರಾಜ್ಯದ ನಾಲ್ವರು ಸಚಿವರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ತನಗೆ ಕೊರೊನಾ ಸೋಂಕು ನೆಗೆಟಿವ್ ಬಂದಿದ್ದು, 7 ದಿನ ಹೋಮ್ ಕ್ವಾರಂಟೈನ್ ನಲ್ಲಿರಲು ನಿರ್ಧರಿಸಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಸಚಿವ ಕೆ.ಸುಧಾಕರ್, ‘ನಾನು ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ. ಆದರೂ ಮುಂಜಾಗ್ರತಾ ಕ್ರಮ ವಹಿಸಿದ್ದೇನೆ. 7 ದಿನ ಹೋಮ್ ಕ್ವಾರಂಟೈನ್ ನಲ್ಲಿರಲು ನಿರ್ಧರಿಸಿದ್ದಾನೆ. ಮನೆಯಿಂದಲೇ ನಾನು ನನ್ನ ಕೆಲಸ ನಿಭಾಯಿಸುತ್ತೇನೆ’ ಎಂದು ತಿಳಿಸಿದ್ದಾರೆ.
- Advertisement -