ಬೆಂಗಳೂರು : ಇಂದು ಮಂಡ್ಯ ಜಿಲ್ಲೆಯ ಮೂವರಿಗೆ, ಬೆಂಗಳೂರಿನಲ್ಲಿ ಮತ್ತೆ ನಾಲ್ವರಿಗೆ, ಬಾಗಲಕೋಟೆ 2, ಕಲಬುರ್ಗಿ 2 ಮತ್ತು ಗದಗ ಜಿಲ್ಲೆಯಲ್ಲಿ ಒಬ್ಬರಿಗೆ ಸೇರಿದಂತೆ ರಾಜ್ಯದಲ್ಲಿ 12 ಜನರಿಗೆ ಕೊರೊನಾ ವೈರಸ್ ಸೋಂಕು ಪಾಸಿಟಿಪ್ ಇರುವುದಾಗಿ ಪತ್ತೆಯಾಗಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 175ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಹೊಸದಾಗಿ 12 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಮಂಡ್ಯ ಜಿಲ್ಲೆಯಲ್ಲಿ 4 ಜನರಿಗೆ ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಬೆಂಗಳೂರಿನಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಇಬ್ಬರಿಗೆ, ಕಲಬುರ್ಗಿಯಲ್ಲಿ 2 ಕೇಸ್ ಪತ್ತೆಯಾಗಿದೆ ಎಂಬುದಾಗಿ ತಿಳಿಸಿದೆ.
ಇನ್ನೂ ಗದಗ ಜಿಲ್ಲೆಗೂ ಕೊರೊನಾ ವೈರಸ್ ಸೋಂಕು ಕಾಲಿಟ್ಟಿದ್ದು, ಇಂದು ಒಬ್ಬರಿಗೆ ಕೊರೊನಾ ಪಾಸಿಟಿವ್ ಇರುವುದಾಗಿ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕಳೆದ ನಿನ್ನೆ 163ಕ್ಕೆ ಕೊನೆಗೊಂಡಿದ್ದಂತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಇಂದು 12 ಹೊಸ ಕೇಸ್ ಪತ್ತೆಯಾಗುವ ಮೂಲಕ 175ಕ್ಕೆ ಏರಿಕೆಯಾಗಿರುವುದಾಗಿ ತಿಳಿಸಿದೆ.