Wednesday, December 6, 2023
Homeಇತರಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಕೊರೊನಾ ಪಾಸಿಟಿವ್

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್ ಪಂದ್ಯವಾಡಲು ಸರಣಿಗೆ ತೆರಳಿರುವ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ ಸೇರಿದಂತೆ ಕೆಲ ಆಟಗಾರರು ಮೊದಲು ಇಂಗ್ಲೆಂಡ್‍ಗೆ ಪ್ರಯಾಣ ಬೆಳೆಸಿದ್ದರು. ಆ ಬಳಿಕ ನಾಯಕ ರೋಹಿತ್ ಶರ್ಮಾ ಸೇರಿದಂತೆ ಇನ್ನೂಳಿದ ಇತರ ಆಟಗಾರರು ಇಂಗ್ಲೆಂಡ್‍ಗೆ ತೆರಳಿ ಅಭ್ಯಾಸ ಆರಂಭಿಸಿದ್ದರು. ಆದರೆ ಇದೀಗ ವಿರಾಟ್ ಕೊಹ್ಲಿಗೆ ಕೊರೊನಾ ಟೆಸ್ಟ್ ವೇಳೆ ಪಾಸಿಟಿವ್ ವರದಿಯಾಗಿದೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

ವಿರಾಟ್ ಕೊಹ್ಲಿ ಹಾಗೂ ಅನುಷ್ಕ ಶರ್ಮಾ 15ನೇ ಆವೃತ್ತಿ ಐಪಿಎಲ್‌ ಬಳಿಕ ಹಾಲಿಡೇ ಎಂಜಾಯ್ ಮಾಡಲು ಮಾಲ್ಡೀವ್ಸ್‌ಗೆ ತೆರಳಿದ್ದರು. ಈ ವೇಳೆ ಕೊಹ್ಲಿಗೆ ಸೋಂಕು ತಗುಲಿತ್ತು ಇದೀಗ ಗುಣಮುಖರಾಗಿದ್ದಾರೆ ಎಂಬ ಕುರಿತು ತಂಡದ ಮೂಲಗಳಿಂದ ವರದಿಯಾಗಿದೆ.

ರವಿಚಂದ್ರನ್ ಅಶ್ವಿನ್‍ಗೆ ಈ ಮೊದಲು ಕೊರೊನಾ ಕಾಣಿಸಿಕೊಂಡಿದ್ದು, ಬಳಿಕ ಅವರು ತಂಡದಿಂದ ದೂರ ಉಳಿದುಕೊಂಡು ಕ್ವಾರಂಟೈನ್‍ನಲ್ಲಿದ್ದಾರೆ. ಕಳೆದ ವರ್ಷ 5 ಪಂದ್ಯಗಳ ಟೆಸ್ಟ್ ಸರಣಿಯ ವೇಳೆ ತಂಡದಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದಿದ್ದು, ಕೋವಿಡ್ ಹೆಚ್ಚಾದ ಬಳಿಕ 5ನೇ ಪಂದ್ಯ ನಡೆಸದೆ ಸರಣಿಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಇದೀಗ ಈ ಪಂದ್ಯವನ್ನು ಮುಂದುವರಿಸುತ್ತಿದ್ದು, ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು 2-1 ಅಂತರದ ಮುನ್ನಡೆ ಪಡೆದುಕೊಂಡಿದೆ.

- Advertisement -
spot_img

Latest News

error: Content is protected !!