Thursday, June 4, 2026
Homeಕರಾವಳಿಬೆಳ್ಳಾರೆಯ ವ್ಯಕ್ತಿಗೆ ಕೊರೋನಾ ಪಾಸಿಟಿವ್: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಬೆಳ್ಳಾರೆಯ ವ್ಯಕ್ತಿಗೆ ಕೊರೋನಾ ಪಾಸಿಟಿವ್: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

- Advertisement -
- Advertisement -

ಬೆಳ್ಳಾರೆ: ದೇಶದ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮುಂಬಯಿಂದ ಸುಳ್ಯ ತಾಲೂಕಿನ ಬೆಳ್ಳಾರೆಗೆ ಆಗಮಿಸಿದ ವ್ಯಕ್ತಿ ಒಂದು ದಿವಸ ಮನೆಯಲ್ಲಿಯೇ ಉಳಿದುಕೊಂಡಿದ್ದ ಇದು ಸ್ಥಳೀಯರಿಗೆ ಗೊತ್ತಾಗಿ ಅವರು ಕೊರೊನೊ ಕಾರ್ಯಪಡೆಗೆ ಮಾಹಿತಿ ನೀಡಿದ್ದರು.

ಬಳಿಕ ಬೆಳ್ಳಾರೆಯ ವಸತಿ ನಿಯಲದಲ್ಲಿ ಕ್ವಾರಟೈನ್ಲ್ಲಿ ಇರಲು ಸೂಚಿಸಲಾಗಿತ್ತು. ಗಂಟಲಿನ ದ್ರವನ್ನು ಪರೀಕ್ಷೆಗೆ ಕಳುಹಿಸಿ ಕೊಟ್ಟು ವರದಿ ಪಾಸಿಟಿವ್ ಬಂದಿತ್ತು. ಕ್ವಾರಂಟೈನ್ ಮೊದಲು ಆತ ಸುಳ್ಯ ಬೆಳ್ಳಾರೆ ಪರಿಸರದಲ್ಲಿ ಸುತ್ತಾಡಿದ್ದಾನೆ ಎಂಬ ಮಾಹಿತಿ ಇದೆ. ಕ್ವಾರಂಟೈನ್ ಸಂದರ್ಭದಲ್ಲಿ ಅನೇಕರು ಆತನ ಬಳಿ ಬಂದು ಸಂಪರ್ಕ ಇಟ್ಟುಕೊಂಡಿದ್ದರು ಎನ್ನಲಾಗಿದೆ.

ಇದರಿಂದ ಜನರ ಆತಂಕಕ್ಕೆ ಕಾರಣವಾಗಿದೆ. ದಖಾಸ್ತು ರಸ್ತೆಗೆ ಇಂದು ಬೆಳಿಗ್ಗೆ ಮಣ್ಣು ಹಾಕಿ ಬಂದ್ ಮಾಡಲಾಗಿದ್ದು ಸ್ವಲ್ಪ ಹೊತ್ತಿನ ಬಳಿಕ ಮಣ್ಣನ್ನು ತೆಗೆದು ವಾಹನ ಸಂಚಾರಕ್ಕೆ ರಸ್ತೆಯನ್ನು ತೆರವುಗೊಳಿಸಿರುವುದು ಅಚ್ಚರಿಗೆ ಕಾರಣವಾಗಿದೆ.

- Advertisement -

Latest News

error: Content is protected !!