- Advertisement -
- Advertisement -
ಶ್ರೀನಗರ: ಒಂದೆಡೆ ದೇಶಾದ್ಯಂತ ಕೊರೋನಾ ವೈರಸ್ ನಿಂದ ತತ್ತರಿಸುತ್ತಿದೆ. ಇಂತಹ ಸಮಯದಲ್ಲಿ ಜಮ್ಮು ಕಾಶ್ಮಿರದಲ್ಲಿ ಉಗ್ರರ ದಾಳಿಯ ಬಗ್ಗೆ ಮತ್ತೊಂದು ಶಾಕಿಂಗ್ ನ್ಯೂಸ್ ವರದಿಯಾಗಿದೆ.
ಕೊರೊನಾ ಸೋಂಕಿತ ಉಗ್ರರನ್ನ ಪಾಕಿಸ್ತಾನ ಜಮ್ಮು-ಕಾಶ್ಮೀರಕ್ಕೆ ಕಳುಹಿಸುತ್ತಿದೆ ಎಂದು ಡಿಜಿಪಿ ದಿಲ್ಬಾಗ್ ಸಿಂಗ್ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ.
ಉತ್ತರ ಕಾಶ್ಮೀರದ ಗಂಡರ್‌ಬಲ್ ಜಿಲ್ಲೆಯಲ್ಲಿರುವ ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ದಿಲ್ಬಾಗ್ ಸಿಂಗ್, ಇಲ್ಲಿಯವರೆಗೆ ಶಸ್ತ್ರಾಸ್ತ್ರಗಳೊಂದಿಗೆ ಉಗ್ರರನ್ನು ಕಳುಹಿಸುತ್ತಿತ್ತು. ಆದರೆ ಈಗ ಕೋವಿಡ್-19 ಸೋಂಕು ಹೊಂದಿರುವ ಉಗ್ರರನ್ನು ಕಳುಹಿಸುತ್ತಿದೆ ಎಂದು ಹೇಳಿದರು.
ಸೋಂಕಿತ ಉಗ್ರರು, ತಾವು ಅಡಗಿಕೊಳ್ಳುವ ಅಥವಾ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಲು ಭೇಟಿ ನೀಡುವ ಪ್ರದೇಶಗಳಲ್ಲಿ ವೈರಸ್ ಅನ್ನು ಹರಡಬಹುದು. ಹೀಗಾಗಿ ಈ ಕುರಿತು ಎಚ್ಚರ ವಹಿಸುವಂತೆ ಜನರಿಗೆ ಸಿಂಗ್ ಸೂಚನೆ ನೀಡಿದ್ದಾರೆ.
- Advertisement -