- Advertisement -
- Advertisement -
ನವದೆಹಲಿ: ಭಾರತದಲ್ಲಿ ಮಾರಕ ಮಾರಕ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಕೇವಲ 24 ಗಂಟೆಗಳಲ್ಲಿ 3,900 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 46,433ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.
ಇನ್ನು 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 195 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂ 1,568ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ 14,541 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಗುಜರಾತ್ ನಲ್ಲಿ 5,804 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು 46,433 ಮಂದಿ ಸೋಂಕಿತರ ಪೈಕಿ 12,727 ಗುಣಮುಖರಾಗಿದ್ದು, ಪ್ರಸ್ತುತ ದೇಶದಲ್ಲಿ ಇನ್ನೂ 32,138 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
- Advertisement -