ಉಪ್ಪಿನಂಗಡಿ : ದೆಹಲಿಯ ನಿಜಾಮುದ್ದೀನ್ ಮರ್ಕಝ್ ನಲ್ಲಿ ಮಾರ್ಚ್ 13ರಿಂದ 15ರವರೆಗೆ ನಡೆದೆ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದ ಹೆಚ್ಚಿನ ಎಲ್ಲ ಮುಸ್ಲಿಂ ಧಾರ್ಮಿಕ ಮುಖಂಡರು ಕೊರೋನಾ ವೈರಸ್ ಎಂಬ ಮಹಾ ಮಾರಿಗೆ ತುತ್ತಾಗಿರಬಹುದು ಎಂಬ ಪ್ರಾಥಮಿಕ ವರದಿಯನ್ನು ಗುಪ್ತಚರ ಇಲಾಖೆಯ ಅಧಿಕಾರಿಗಳು ಪೊಲೀಸ್ ಇಲಾಖೆಗೆ ರವಾನಿಸಿದ್ದಾರೆ ಎನ್ನಲಾಗಿದೆ.
ನಿನ್ನೆಯಷ್ಟೇ ಈ ಸಮಾವೇಶದಲ್ಲಿ ಭಾಗವಹಿಸಿದ್ದ ತೊಕ್ಕೊಟ್ಟು ಮೂಲದ ಮುಸ್ಲಿಂ ಧಾರ್ಮಿಕ ಮುಖಂಡರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿ, ತಪಾಸಣೆಗೆ ಒಳಪಡಿಸಿದ್ದರು. ಇದೀಗ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪರಿಸರದ ಮುಸ್ಲಿಂ ಧಾರ್ಮಿಕ ಮುಖಂಡರೊಬ್ಬರು ಈ ಸಮಾವೇಶದಲ್ಲಿ ಭಾಗವಹಿಸಿದ್ದರು ಎಂಬ ಮಾಹಿತಿ ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ ಎನ್ನಲಾಗಿದೆ.
ಉಪ್ಪಿನಂಗಡಿ ಮೂಲದ ವ್ಯಕ್ತಿಯನ್ನು ಈಗಾಗಲೇ ಪತ್ತೆ ಹಚ್ಚಿದ್ದು, ಸದ್ಯ ವಿಚಾರಣೆ ನಡೆಯುತ್ತಿದೆ. ಈತನನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ದೆಹಲಿ ಸಮಾವೇಶದಿಂದ ವಾಪಾಸ್ ಆದ ನಂತರ ಆತ ಭೇಟಿಯಾಗಿರುವ ಎಲ್ಲ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ಅವರ ಪ್ರಾಥಮಿಕ ತಪಾಸಣೆಗೂ ಸಕಲ ಸಿದ್ಧತೆ ನಡೆಯುತ್ತಿದೆ.