Sunday, June 7, 2026
Homeತಾಜಾ ಸುದ್ದಿSSLC ವಿದ್ಯಾರ್ಥಿ ಬೆನ್ನಲ್ಲೇ ಕೊಠಡಿ ಮೇಲ್ವಿಚಾರಕಿಗೂ ಕೊರೊನಾ ದೃಢ

SSLC ವಿದ್ಯಾರ್ಥಿ ಬೆನ್ನಲ್ಲೇ ಕೊಠಡಿ ಮೇಲ್ವಿಚಾರಕಿಗೂ ಕೊರೊನಾ ದೃಢ

- Advertisement -
- Advertisement -

ಬಾಗಲಕೋಟೆ : ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಬಾಗಲಕೋಟೆಯಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆದ ಮೂವರು ವಿದ್ಯಾರ್ಥಿಗಳಿಗೆ ಸೋಂಕು ತಗುಲಿದ ಬೆನ್ನಲ್ಲೇ ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಬಾಗಲಕೋಟೆಯ ನವನಗರದಲ್ಲಿರುವ ಆದರ್ಶ ವಿದ್ಯಾಲಯದ ಬಾಹ್ಯ ಪರೀಕ್ಷಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕಿಗೆ ಕೊರೊನಾ ವೈರಸ್ ದೃಢಪಟ್ಟಿದೆ. ಹಳ್ಳೂರು ಗ್ರಾಮದ ಪ್ರೌಢಶಾಲೆ ಶಿಕ್ಷಕಿ ಜೂನ್ 25 ಮತ್ತು 26 ರಂದು ನಡೆದ ಪರೀಕ್ಷೆ ವೇಳೆ ಕೊಠಡಿ ಮೇಲ್ವಿಚಾರಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಅನಾರೋಗ್ಯದ ಹಿನ್ನೆಲೆಯಲ್ಲಿ ಶಿಕ್ಷಕಿಯೇ ಕೊವಿಡ್ ಆಸ್ಪತ್ರೆಗೆ ಭೇಟಿ ನೀಡಿ ಗಂಟಲು ಮಾದರಿ ದ್ರವ ಪರೀಕ್ಷೆ ಮಾಡಿಸಿದ್ದು, ಈ ವೇಳೆ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

- Advertisement -

Latest News

error: Content is protected !!