Saturday, October 24, 2026
Homeಕರಾವಳಿಉಜಿರೆ: ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿರುವ ಮತ್ತೊಂದು ಸಿಬ್ಬಂದಿಗೂ ಕೊರೊನಾ ಪಾಸಿಟಿವ್ !

ಉಜಿರೆ: ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿರುವ ಮತ್ತೊಂದು ಸಿಬ್ಬಂದಿಗೂ ಕೊರೊನಾ ಪಾಸಿಟಿವ್ !

- Advertisement -
- Advertisement -

ಉಜಿರೆ: ಕೆಲ ದಿನಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಉಜಿರೆ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಇದೀಗ ಅದೇ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ಮಾಡುತ್ತಿದ್ದ ಮತ್ತೊಬ್ಬ ಸಿಬ್ಬಂದಿಗೂ ಕಿಲ್ಲರ್ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.

ಹಿಂದೆ ಈ ಪೆಟ್ರೋಲ್ ಪಂಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿಗೆ ಕೊರೋನಾ ಪಾಸಿಟಿವ್ ಬಂದ ಮೇಲೆ ಅದು ಕೊರೊನಾ ಅಲ್ಲ ಡೆಂಗ್ಯೂ ಎಂದು ಸುದ್ದಿ ಹಬ್ಬಿಸಿ, ಆ ಪಂಪ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡಿದ್ದ ಜನರನ್ನು ಸ್ವಲ್ಪ ಮಟ್ಟಿಗೆ ಶಾಂತರನ್ನಾಗಿಸಿದ್ದರು. ಇದೀಗ ಅದೇ ಪಂಪ್ ನ ಮತ್ತೊಂದು ಸಿಬ್ಬಂದಿಗೂ ಕೊರೋನಾ ದೃಢವಾಗಿರುವುದು ಬೆಳ್ತಂಗಡಿ ತಾಲೂಕಿನ ಜನರನ್ನು ಆತಂಕಕ್ಕೆ ತಳ್ಳಿದೆ.

ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ತನ್ನ ಆರ್ಭಟವನ್ನು ಹೆಚ್ಚಿಸುತ್ತಿದೆ. ಇಷ್ಟು ದಿನ ನಗರ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದ್ದ ಕೊರೊನಾ ಪಾಸಿಟಿವ್ ಪ್ರಕರಣಗಳೂ ಇದೀಗ ಹಳ್ಳಿ ಹಳ್ಳಿಗಳಿಗೂ ಕಾಲಿಟ್ಟಿರೋದು ಆತಂಕಕ್ಕೆ ಕಾರಣವಾಗಿದೆ.

- Advertisement -

Latest News

error: Content is protected !!