ನವದೆಹಲಿ : ದೇಶದಾದ್ಯಂತ ಮಾರಕ ಕೊರೊನಾ ಸೋಂಕು ಆತಂಕ ಸೃಷ್ಟಿಸಿದೆ. ಇಂದಿನಿಂದ ದೇಶದಲ್ಲಿ ಮೇ.17ರವರೆಗೆ ಲಾಕ್ ಡೌನ್ -3 ಮುಂದುವರೆಸಿದ್ದರೂ ಕೆಲವೊಂದು ವಿನಾಯಿತಿ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 2553 ಮಂದಿಯಲ್ಲಿ ಕೊರೊನಾ ಸೋಂಕು ಪಾಸಿಟಿವ್ ಬಂದಿದ್ದು, ಕಿಲ್ಲರ್ ಕೊರೊನಾಗೆ 72 ಮಂದಿ ಬಲಿಯಾಗಿದ್ದಾರೆ.
ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2553 ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದೆ. ಇನ್ನು ಡೆಡ್ಲಿ ಕೊರೊನಾಗೆ ಒಂದೇ ದಿನದಲ್ಲಿ 72 ಮಂದಿ ಬಲಿಯಾಗಿದ್ದಾರೆ. ಇನ್ನು ದೇಶದಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 42,533ಕ್ಕೆ ಏರಿಕೆಯಾಗಿದೆ. ಈ ಪೈಕಿ 29,453 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 11,707 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಕಿಲ್ಲರ್ ಕೊರೊನಾಗೆ ಈವರೆಗೆ 1373 ಮಂದಿ ಬಲಿಯಾಗಿದ್ದಾರೆ…