Friday, June 5, 2026
Homeಇತರಕರ್ನಾಟಕದಲ್ಲಿ ಇಂದು 36 ಜನರಿಗೆ ಕೊರೋನಾ ಸೋಂಕು ದೃಢ : ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆ

ಕರ್ನಾಟಕದಲ್ಲಿ ಇಂದು 36 ಜನರಿಗೆ ಕೊರೋನಾ ಸೋಂಕು ದೃಢ : ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆ

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ದಾಖಲೆಯ ಏರಿಕೆಯಾಗಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 36 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಹೊಸದಾಗಿ 36 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆಯಾಗಿರುವುದಾಗಿ ತಿಳಿದು ಬಂದಿದೆ..

ಅಂದಹಾಗೇ ಇಂದು ದಾವಣಗೆರೆ 06, ಬೆಂಗಳೂರು 12, ತುಮಕೂರು 01, ವಿಜಯಪುರ 01, ಬೀದರ್ 02, ದಕ್ಷಿಣ ಕನ್ನಡ 03, ಉತ್ತರ ಕನ್ನಡ 07, ಚಿತ್ರದುರ್ಗ ಮೂವರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ 36 ಜನರಿಗೆ ಕೊರೋನಾ ಸೋಂಕು ತಗುಲಿ, ಕೊರೋನಾ ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ.

ಇನ್ನೂ ಕಿಲ್ಲರ್ ಕೊರೋನಾಗೆ ಇದುವರೆಗೆ 30 ಜನರು ರಾಜ್ಯದಲ್ಲಿ ಸಾವನ್ನಪ್ಪಿದ್ದರೇ, ಸೋಂಕಿತರಾದಂತ 379 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂಬುದಾಗಿ ಮಾಹಿತಿ ನೀಡಿದರು.

- Advertisement -

Latest News

error: Content is protected !!