ನವದೆಹಲಿ : ಕೊರೊನಾ ವೈರಸ್ ಗೆ ತತ್ತರಿಸಿರುವ ದೇಶದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್ ವೊಂದು ಹೊರಬಿದ್ದಿದ್ದು, ಭಾರತದ ಎರಡು ಬಗೆಯ ಬಾವಲಿಗಳಲ್ಲಿ ಕೊರೊನಾ ವೈರಸ್ ಸೋಂಕು ಕಂಡುಬಂದಿದೆ ಎಂದು ವರದಿಯಾಗಿದೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಕೇರಳ, ತಮಿಳುನಾಡು, ಹಿಮಾಚಲ ಪ್ರದೇಶ ಮತ್ತು ಪುದುಚೇರಿಯಿಂದ ಸಂಗ್ರಹಿಸಲಾದ 25 ಬಾವಲಿಗಳ ಮಾದರಿಗಳ ರಿವರ್ಸ್ ಟ್ರಾನ್ಸ್ಕ್ರಿಪ್ಷನ್ ಪಾಲಿಮರೇಸ್ ಚೈನ್ ರಿಯಾಕ್ಷನ್ ಪರೀಕ್ಷೆಗಳನ್ನು ನಡೆಸಿದ ಬಳಿಕ ಇಂಡಿಯನ್ ಪ್ಲೈಯಿಂಗ್ ಫಾಕ್ಸ್ ಮತ್ತು ರೌಸೆಟ್ಟಸ್ ಪ್ರಭೇದಗಳ ಎರಡು ಬಾವಲಿಗಳಲ್ಲಿ ಕೊರೊನಾ ವೈರಸ್ ಕಂಡು ಬಂದಿದೆ ಎಂದು ತಿಳಿಸಿದೆ.
ಪುಣೆಯ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ವೈರಾಲಜಿಯ ವಿಜ್ಞಾನಿಗಳ ತಂಡದೊಂದಿಗೆ ಜಂಟಿಯಾಗಿ ನಡೆಸಿದ ಐಸಿಎಂಆರ್ ಅಧ್ಯಯನವನ್ನು ಇಂಡಿಯನ್ ಜರ್ನಲ್ ಆಫ್ ಮೆಡಿಕಲ್ ರಿಸರ್ಚ್ ನಲ್ಲಿ ಪ್ರಕಟಗೊಂಡಿದೆ. ಈ ಸಂಶೋಧನೆಗಳು ಭಾರತದಲ್ಲಿ ಮೊದಲ ಬಾರಿಗೆ ಬಾವಲಿಗಳಲ್ಲಿ ಕೊರೊನಾ ವೈರಸ್ ಇರುವಿಕೆಯನ್ನು ಸಂಶೋಧಿಸಲು ನಡೆಯುತ್ತಿರುವ ಅಧ್ಯಯನದ ಭಾಗವಾಗಿದೆ ಎಂದು ಮೂಲಗಳು ತಿಳಿಸಿವೆ.