- Advertisement -
- Advertisement -
ಶಿವಮೊಗ್ಗ : ಕೊರೋನಾ ವೈರಸ್ ತಡೆಗೆ ಲಾಕ್ ಡೌನ್ ಘೋಷಿಸಿದ್ದು, ಮಸೀದಿ, ಚರ್ಚ್, ಮಂದಿರಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ಈ ನಡುವೆ ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಮಸೀದಿ ಒಂದರಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಮಾಡಲು ಮುಂದಾಗಿದ್ದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಶಿವಮೊಗ್ಗದ ಇಲಿಯಾಸ್ ನಗರದ 5ನೇ ತಿರುವಿನಲ್ಲಿರುವ ಮಸೀದಿ ಬಳಿ 30 ಮಂದಿ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಪ್ರಾರ್ಥನೆ ಸಲ್ಲಿಸಲು ಮುಂದಾಗಿದ್ದಾರೆ. ಮುಖಕ್ಕೆ ಮಾಸ್ಕ್ ಧರಿಸದೆ ಗುಂಪುಗೂಡಿ ನಮಾಜ್ ಮಾಡಲು ಮುಂದಾಗಿದ್ದು, ಈ ವೇಳೆ ಗಸ್ತಿನಲ್ಲಿದ್ದ ಪೊಲೀಸರನ್ನು ಕಂಡು ಗುಂಪಿನಲ್ಲಿದ್ದ ಕೆಲವರು ಪರಾರಿಯಾಗಿದ್ದು, 7 ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ.
- Advertisement -
