- Advertisement -
- Advertisement -
ನವದೆಹಲಿ : ಕೋವಿಡ್ 19 ವೈರಸ್ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್ ಗೆ ಭಾರತೀಯ ಸೇನೆ, ಹೆಲಿಕಾಪ್ಟರ್ ಮೂಲಕ ಹೂಮಳೆ ಸುರಿಸುವ ಮೂಲಕ ಇಂದು ವಿಶೇಷ ಗೌರವ ಸಲ್ಲಿಸಿದೆ.
ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತೀಯ ವಾಯು ಸೇನೆಯ ವಿಮಾನಗಳು ಸಂಚರಿಸುವ ಮೂಲಕ ಕೊರೊನಾ ವಾರಿಯರ್ಸ್ ಗಳಿಗೆ ಗೌರವ ಸೂಚಿಸಿವೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿಗಳೂ ಕೂಡ ಸೇನೆಯ ಗೌರವಕ್ಕೆ ಪಾತ್ರರಾಗಿದ್ದಾರೆ.
ಕೊರೊನಾ ವೈರಸ್ ವಿರುದ್ಧ ಹಗಲು ರಾತ್ರಿ ಎನ್ನದೆ, ಆರೋಗ್ಯ ಸಿಬ್ಬಂದಿಗಳು, ಪೊಲೀಸರು, ಪೌರಕಾರ್ಮಿಕರು, ಮಾಧ್ಯಮ ಪತ್ರಕರ್ತರು ಸೇರಿದಂತೆ ಹಲವು ಸಂಖ್ಯೆಯ ಸ್ವಯಂ ಸೇವಕರು ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.ಹೀಗಾಗಿ ಭಾರತೀಯ ವಾಯುಸೇನೆ ಕೊರೊನಾ ವಾರಿಯರ್ಸ್ ಮೇಲೆ ಹೂಮಳೆ ಸುರಿಸುವ ಮೂಲಕ ಗೌರವ ಸಲ್ಲಿಸಿದೆ.
- Advertisement -