Saturday, May 4, 2024
Homeತಾಜಾ ಸುದ್ದಿರಾಜ್ಯಕ್ಕೆ‌ ಕೊರೋನಾ XE, ME ರೂಪಾಂತರಿ ಭೀತಿ : ತಾಂತ್ರಿಕ ಸಲಹಾ ಸಮಿತಿ ಜೊತೆ ಸಚಿವ...

ರಾಜ್ಯಕ್ಕೆ‌ ಕೊರೋನಾ XE, ME ರೂಪಾಂತರಿ ಭೀತಿ : ತಾಂತ್ರಿಕ ಸಲಹಾ ಸಮಿತಿ ಜೊತೆ ಸಚಿವ ಸುಧಾಕರ್ ತುರ್ತು ಸಭೆ

spot_img
- Advertisement -
- Advertisement -

ಬೆಂಗಳೂರು : ಕೊರೋನಾ ಕಡಿಮೆಯಾಗಿ ಜನ ನಿಟ್ಟುಸಿರು ಬಿಡುವ ನಡುವೆಯೇ ಮತ್ತೊಂದು ಹೊಸ ರೂಪಾಂತರಿ XE ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಸೌಧದಲ್ಲಿ ತಾಂತ್ರಿಕ ಸಲಹಾ ಸಮಿತಿಯ ಜೊತೆ ಆರೋಗ್ಯ ಸಚಿವ ಡಾ.‌ ಕೆ ಸುಧಾಕರ್ ತುರ್ತು ಸಭೆ ನಡೆಸಿದರು.‌ ಸಭೆ ಬಳಿಕ ಮಾತಾನಾಡಿದ ಆರೋಗ್ಯ ಸಚಿವ ಸುಧಾಕರ್, 8 ದೇಶಗಳಲ್ಲಿ ನಾಲ್ಕನೇ ಅಲೆ ಹೆಚ್ಚಾಗಿದ್ದು, XE ಹಾಗೂ ME ಎಂಬ ಹೊಸ ಪ್ರಬೇಧ ಹೆಚ್ಚಾಗಿದೆ. ನಮ್ಮ ದೇಶದಲ್ಲಿ ಹರಿಯಾಣ, ದೆಹಲಿಯಲ್ಲಿ ಕಳೆದ ಮೂರು ದಿನಗಳಲ್ಲಿ ಸೋಂಕು ಹೆಚ್ಚಾಗಿದೆ. ಹೀಗಾಗಿ ತುರ್ತು ಸಭೆ ಮಾಡಿ ಸಮಾಲೋಚನೆ ಮಾಡಿದ್ದು, ತಾಂತ್ರಿಕ ಸಲಹಾ ಸಮಿತಿ ನೀಡಿರುವ ಸಲಹೆಯಂತೆ ಸೋಂಕು ಹೆಚ್ಚಿರುವ ದೇಶಗಳಿಂದ ಬರುವವರ ಮೇಲೆ ನಿಗಾ ವಹಿಸಲು ಅಭಿಪ್ರಾಯ ವ್ಯಕ್ತವಾಗಿದೆ. ಏರ್ ಪೋರ್ಟ್ ಗೆ ಬಂದ ಬಳಿಕ ಅವರಿಗೆ ಟೆಸ್ಟ್ ಮಾಡಿ, ಮನೆಗೆ ಹೋದ ಬಳಿಕ ಟೆಲಿ ಮಾನಿಟರಿಂಗ್ ಮಾಡಲು ತೀರ್ಮಾನ ಮಾಡಲಾಗಿದೆ ಎಂದರು.

IIT ಕಾನ್ಪುರ್ ರಿಪೋರ್ಟ್ ‌ಪ್ರಕಾರ ಜೂನ್- ಜುಲೈ ನಲ್ಲಿ ನಾಲ್ಕನೇ ಅಲೆ ಬರುತ್ತೆ ಎಂದು ಹೇಳಿದ್ದಾರೆ. ಆದರೆ ಜನ ಮಾಸ್ಕ್ ಹಾಕೋದನ್ನೇ ಮರೆತಿದ್ದಾರೆ, ಹೀಗಾಗಿ ಮಾಸ್ಕ್ ಬಳಕೆ ಮಾಡೋದು ಮುಂದುವರೆಸಿ. ಬೂಸ್ಟರ್ ಡೋಸ್ ಪಡೆಯುವ ಬಗ್ಗೆ ಜನರಲ್ಲಿ ನಿರ್ಲಕ್ಷ್ಯ ‌ಕಂಡುಬಂದಿದೆ. ಸೋಂಕು ಹೆಚ್ಚಳ ಆಗಿ ನಂತರ ವ್ಯಾಕ್ಸಿನೇಷನ್‌ ಗೆ ಮುಗಿಬೀಳಬೇಡಿ. ಈಗಲೇ ನಿಮ್ಮ ಅವಧಿ ಬಂದಾಗ ಬೂಸ್ಟರ್ ಡೋಸ್ ಪಡೆಯಿರಿ ಅಂತ ಮನವಿ ಮಾಡಿದ್ರು.‌

60 ವರ್ಷ ಮೇಲ್ಪಟ್ಟವರು ಮೂರನೇ ಡೋಸ್ ಪಡೆಯಬೇಕಿದೆ. ಜೊತೆಗೆ ಇನ್ನೂ ಶೇ.2 ರಷ್ಟು ಮಂದಿ ಎರಡನೇ ಡೋಸ್ ಪಡೆಯಬೇಕಿದೆ. ಮೊದಲ ಡೋಸ್ ನಲ್ಲಿ 102% (4.97 ಕೋಟಿ ), ಎರಡನೇ ಡೋಸ್ ನಲ್ಲಿ 98% (4.77 ಕೋಟಿ) ಪ್ರಗತಿಯಾಗಿದೆ. ಇನ್ನೂ 32 ಲಕ್ಷ ಮಂದಿ ಎರಡನೇ ಡೋಸ್ ಪಡೆಯಬೇಕಿದೆ. ಇದು ಬಹಳ ನಿರ್ಲಕ್ಷ್ಯದ ಸಂಗತಿಯಾಗಿದ್ದು, ಯಾರೂ ಉದಾಸೀನ ತೋರಬಾರದು ಎಂದು ಸಚಿವ ಸುಧಾಕರ್ ಮನವಿ ಮಾಡಿದ್ರು.

15-17 ವಯೋಮಾನದವರ ಲಸಿಕಾರಣದಲ್ಲಿ ಮೊದಲ ಡೋಸ್ ನಲ್ಲಿ 79% (25.11 ಲಕ್ಷ) ಪ್ರಗತಿಯಾಗಿದೆ. ಇದರ ಗುರಿ 31 ಲಕ್ಷದ ಗುರಿ ಇದೆ. ಎರಡನೇ ಡೋಸ್ ಲಸಿಕಾರಣದಲ್ಲಿ 65% ಪ್ರಗತಿಯಾಗಿದ್ದು, ಇನ್ನೂ 35% ಮಂದಿ ಲಸಿಕೆ ಪಡೆಯಬೇಕಿದೆ. 60 ವರ್ಷ ಮೇಲ್ಪಟ್ಟವರಲ್ಲಿ 49% ಮಂದಿ ಮಾತ್ರ ಮೂರನೇ ಡೋಸ್ ಪಡೆದಿದ್ದಾರೆ. ಇನ್ನೂ 51% ಮಂದಿ ಮೂರನೇ ಡೋಸ್ ಲಸಿಕೆ ಪಡೆದೇ ಇಲ್ಲ. ಈ ವಯೋಮಾನದವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಬೇಗ ಲಸಿಕೆ ಪಡೆಯುವುದು ಸೂಕ್ತ. ಜನಸಾಮಾನ್ಯರು ಸರ್ಕಾರದಂತೆಯೇ ಜವಾಬ್ದಾರಿ ಹೊಂದಿರಬೇಕು. ಆಗ ಮಾತ್ರ ಆರೋಗ್ಯ ತುರ್ತು ಪರಿಸ್ಥಿತಿ ನಿಭಾಯಿಸಲು ಸಾಧ್ಯ ಎಂದರು.

- Advertisement -
spot_img

Latest News

error: Content is protected !!