Sunday, May 12, 2024
Homeಕರಾವಳಿಉಡುಪಿಉಡುಪಿ-ಮಂಗಳೂರು-ಬೆಂಗಳೂರು ನಡುವೆ ಕಾರಿಡಾರ್ ರಸ್ತೆ ನಿರ್ಮಾಣಕ್ಕೆ ರೂಪುರೇಷೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ

ಉಡುಪಿ-ಮಂಗಳೂರು-ಬೆಂಗಳೂರು ನಡುವೆ ಕಾರಿಡಾರ್ ರಸ್ತೆ ನಿರ್ಮಾಣಕ್ಕೆ ರೂಪುರೇಷೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ

spot_img
- Advertisement -
- Advertisement -

ಉಡುಪಿ: ಪ್ರವಾಸೋದ್ಯಮಕ್ಕೆ ಉಡುಪಿ ಯೋಗ್ಯವಾದ ಜಿಲ್ಲೆಯಾಗಿದ್ದು ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಕುಂದಾಪುರದಲ್ಲಿ ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಅವರ ಯುವ ಮನೀಶ್ ನೂತನ ಹೋಟೆಲ್‌ನ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಜಿಲ್ಲೆಯ ಅಭಿವೃದ್ಧಿಗೆ ಸರ್ವರೀತಿಯಿಂದಲೂ ಶ್ರಮಿಸಲಾಗುವುದು ಎಂದು ಹೇಳಿದರು.

ಕರಾವಳಿ ಜನ ದೈವ ಭಕ್ತರಾಗಿದ್ದು ಅವರಿಗೆ ಸದಾ ದೇವರ ಆಶೀರ್ವಾದ ಇರುತ್ತದೆ. ಹೀಗಾಗಿಯೇ ಅವರು ದೇಶಾದ್ಯಂತ ಉದ್ಯಮಗಳನ್ನು ಸ್ಥಾಪಿಸಿದ್ದಾರೆ ಎಂದು ಕಾರ್ಯಕ್ರಮದಲ್ಲಿ ಸಚಿವೆ ಹೆಬ್ಬಾಳ್ಕರ್ ಹೇಳಿದ್ದಾರೆ.

ಇದೇ ವೇಳೆ, ಉಡುಪಿ-ಮಂಗಳೂರು-ಬೆಂಗಳೂರು ನಡುವೆ ಕಾರಿಡಾರ್ ರಸ್ತೆ ನಿರ್ಮಾಣಕ್ಕೆ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಹೇಳಿರುವ ಲಕ್ಷ್ಮೀ ಹೆಬ್ಬಾಳ್ಕರ್, ಇದರಿಂದ ಜಿಲ್ಲೆಯ ಹೋಟೆಲ್ ಉದ್ಯಮ ಹಾಗೂ ಪ್ರವಾಸೋದ್ಯಮಕ್ಕೂ ಹೆಚ್ಚು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಸಮಾರಂಭದಲ್ಲಿ ಘಟಪ್ರಭಾದ ಗುಬ್ಬಲಗುಡ್ಡ ಕೆಂಪಯ್ಯ ಸ್ವಾಮಿ ಮಠದ ಡಾ.ಮಲ್ಲಿಕಾರ್ಜುನ ಮಹಾಸ್ವಾಮಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ರಾಜ್ಯ ಹಿಂದುಳಿದ ವರ್ಗ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!