Saturday, June 28, 2025
Homeಕರಾವಳಿಬೆಳ್ತಂಗಡಿ : ಇಂದಬೆಟ್ಟು ಗ್ರಾ.ಪಂ ನಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣ;ಭ್ರಷ್ಟಾಚಾರ ನಡೆದಿರುವುದು ಲೋಕಾ ತನಿಖೆಯಿಂದ ಬಹಿರಂಗ;ತನಿಖಾ...

ಬೆಳ್ತಂಗಡಿ : ಇಂದಬೆಟ್ಟು ಗ್ರಾ.ಪಂ ನಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣ;ಭ್ರಷ್ಟಾಚಾರ ನಡೆದಿರುವುದು ಲೋಕಾ ತನಿಖೆಯಿಂದ ಬಹಿರಂಗ;ತನಿಖಾ ವರದಿಯ ಸಂಪೂರ್ಣ ದಾಖಲೆ ಮಹಾ ಎಕ್ಸ್ ಪ್ರೆಸ್ ಗೆ ಲಭ್ಯ

spot_img
- Advertisement -
- Advertisement -

ಬೆಳ್ತಂಗಡಿ : ಇಂದಬೆಟ್ಟು ಗ್ರಾಮ ಪಂಚಾಯತ್ ನ 2021-22 ಸಾಲಿನ 15 ನೇ ಹಣಕಾಸಿನ ಕಾಮಗಾರಿಯಲ್ಲಿ ನಡೆದ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ಮಾಡಿ 26 ಪುಟಗಳ ವರದಿ ನೀಡಿದ್ದು. ಕಾಮಗಾರಿಯಲ್ಲಿ ಎಲ್ಲವೂ ಅವ್ಯಹಾರ ನಡೆದಿರುವುದು ಬಹಿರಂಗವಾಗಿದೆ. ಭ್ರಷ್ಟಾಚಾರ ಮಾಡಿದ ನಾಲ್ಕು ಜನರಿಗೆ ನಡುಕ ಸುರುವಾಗಿದೆ. ಲೋಕಾಯುಕ್ತ ತನಿಖಾ ವರದಿಯ ಪ್ರತಿ ಮಹಾಎಕ್ಸ್ ಪ್ರೆಸ್ ವೆಬ್ ಸೈಟ್ ಗೆ ಲಭ್ಯವಾಗಿದೆ.

ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 15 ನೇ ಹಣಕಾಸಿನ ಯೋಜನೆಯ 2021-22 ರಲ್ಲಿ ನಡೆದ ವಿವಿಧ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಬಂಗಾಡಿ ನಿವಾಸಿ ಜಯರಾಮ.ಕೆ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಸಂಬಂಧ ಬೆಂಗಳೂರು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಇದೀಗ ಕ್ರಮ ಕೈಗೊಳ್ಳಲು ವರದಿಯನ್ನು ಹಿರಿಯ ಅಧಿಕಾರಿಗಳಿಗೆ ನೀಡಿದ್ದಾರೆ. ಲೋಕಾಯುಕ್ತ ಪೊಲೀಸರು ಗ್ರಾಮ ಪಂಚಾಯತ್ ನಲ್ಲಿ 13 ಕಾಮಗಾರಿಯಲ್ಲಿ ಭ್ರಷ್ಟಾಚಾರ ಮಾಡಿರುವ ಬಗ್ಗೆ ತನಿಖೆಯಲ್ಲಿ ಪತ್ತೆ ಹಚ್ಚಿದ್ದಾರೆ. ಅದಲ್ಲದೆ ಲೋಕಾಯುಕ್ತ ಪೊಲೀಸರು ತನಿಖೆಯಲ್ಲಿ ಭ್ರಷ್ಟಾಚಾರ ಮಾಡಿದರಲ್ಲಿ 7 ಅಂಶಗಳನ್ನು ಅಭಿಪ್ರಾಯವನ್ನು  ಬಹಿರಂಗಪಡಿಸಿದ್ದಾರೆ‌.

ಗ್ರಾ.ಪಂ ನಲ್ಲಿ ತನಿಖೆ: ಜು.9,10 ರಂದು ಬೆಂಗಳೂರು ಲೋಕಾಯುಕ್ತ ಕೇಂದ್ರ ಕಚೇರಿಯ ಹಿರಿಯ ಉಪ ನಿರ್ದೇಶಕರು ತಾಂತ್ರಿಕ ವಿಭಾಗದ ಇಂಜಿನಿಯರ್ ಪ್ರಕಾಶ್ ಬಣಕಾರ್ ಮತ್ತು ಸಹಾಯಕ ಇಂಜಿನಿಯರ್ ತೇಜಶ್ರೀ ಮತ್ತು ಮಂಗಳೂರು ಲೋಕಾಯುಕ್ತ ಕಚೇರಿಯ ಸಿಬ್ಬಂದಿಯ ನೇತೃತ್ವದ ತಂಡ ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಆಗಮಿಸಿ ತನಿಖೆ ಮಾಡಿ ಹೋಗಿದ್ದರು.

ತನಿಖಾ ವರದಿಯಲ್ಲಿ ಲೋಪ ಎಸಗಿದವರ ವಿವರ: ಬೆಂಗಳೂರು ಲೋಕಾಯುಕ್ತ ತಾಂತ್ರಿಕ ವಿಭಾಗದ ಲೆಕ್ಕ ಪರಿಶೋಧನ ಅಧಿಕಾರಿ ಹಾಗೂ ತನಿಖಾಧಿಕಾರಿ ಬಣಕಾರ್ ಪ್ರಕಾಶ್ ಕುಮಾರ್ ಮತ್ತು ತಾಂತ್ರಿಕ ವಿಭಾಗದ ಸಹಾಯಕ ಇಂಜಿಯರ್ ತೇಜ.ಶ್ರಿ.ಮದ್ದೋಡಿ ಅವರು ತನಿಖೆ ನಡೆಸಿದ ವರದಿಯಲ್ಲಿ 1. ಬೆಳ್ತಂಗಡಿ ಪಂಚಾಯತ್ ರಾಜ್ ಸಹಾಯಕ ಇಂಜಿನಿಯರ್ ಹರ್ಷಿತ್ ,2.ಪಿಡಿಓ ಸವಿತಾ,3. ಇಂದಬೆಟ್ಟು ಗ್ರಾ.ಪಂ ಅಧ್ಯಕ್ಷ ಅನಂದ.ಎ, 4.ನಿವೃತ್ತ ಪಂಚಾಯತ್ ರಾಜ್ ಕಿರಿಯ ಇಂಜಿನಿಯರ್  ಮೊಹಮ್ಮದ್ ಪಿ ಇವರು ನಾಲ್ಕು ಜನ ಕರ್ತವ್ಯ ಲೋಪ ಎಸಗಿರುವುದಾಗಿ ಲೋಕಾಯುಕ್ತ ಹಿರಿಯ ಅಧಿಕಾರಿಗಳಿಗೆ ನಾಲ್ಕು ಜನರ ವಿರುದ್ಧ ಕ್ರಮ ಕೈಗೊಳ್ಳಲು ಆ.5 ರಂದು ವರದಿ ಸಲ್ಲಿಸಿದ್ದಾರೆ.

- Advertisement -
spot_img

Latest News

error: Content is protected !!