Thursday, May 9, 2024
Homeಅಪರಾಧಮಂಗಳೂರು : ಮಿತಿ ಮೀರಿ ಆದಾಯ ಸಂಪಾದನೆ ಮಾಡಿದ ಆರೋಪ ಸಾಬೀತು ; ಮಹಾನಗರ...

ಮಂಗಳೂರು : ಮಿತಿ ಮೀರಿ ಆದಾಯ ಸಂಪಾದನೆ ಮಾಡಿದ ಆರೋಪ ಸಾಬೀತು ; ಮಹಾನಗರ ಪಾಲಿಕೆ ಅಧಿಕಾರಿಗೆ 5 ವರ್ಷ ಜೈಲು ಶಿಕ್ಷೆ!

spot_img
- Advertisement -
- Advertisement -

ಮಂಗಳೂರು : ಮಹಾನಗರ ಪಾಲಿಕೆ ಅಧಿಕಾರಿ ಲಂಚ ಪಡೆದು ತನ್ನ ಆದಾಯಕ್ಕಿಂತ ಹೆಚ್ಚಿನ ಸಂಪಾದನೆಯನ್ನು ಮಾಡಿದ ಆರೋಪ ಸಾಭೀತಾಗಿದ್ದು 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ ಅಪರಾಧಿಗೆ 5 ವರ್ಷ ಶಿಕ್ಷೆ ಮತ್ತು 35 ಲಕ್ಷ ರೂ. ದಂಡ ವಿಧಿಸಿದೆ.

ಮಂಜುನಾಥ ಸ್ವಾಮಿ (50) ಶಿಕ್ಷೆಗೊಳಗಾದ ಅಪರಾಧಿ.ಆದಾಯಕ್ಕಿಂತ ಹೆಚ್ಚು ಸಂಪಾದನೆ ಮಾಡಿದ್ದಾರೆಂಬ ಆಪಾದನೆ ಹಿನ್ನಲೆಯಲ್ಲಿ ಮಂಜುನಾಥ ಸ್ವಾಮಿಯವರ ಮೇಲೆ ಮಂಗಳೂರು ಲೋಕಾಯುಕ್ತ ಪೊಲೀಸರು 2007 ರಲ್ಲಿ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.ಈ ಬಗ್ಗೆ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಸಮಗ್ರ ವಿಚಾರಣೆ ನಡೆಸಿ ಅಪರಾಧ ಸಾಬೀತುಪಡಿಸಿ ಅಂತಿಮ ತೀರ್ಪು ನೀಡಿದ್ದಾರೆ.

ಇನ್ನು ಅಪರಾಧಿಗೆ 5 ವರ್ಷ ಸಾದಾ ಸಜೆ ಹಾಗೂ 35 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಮತ್ತೆ 1 ವರ್ಷಗಳ ಸಾದಾ ಶಿಕ್ಷೆ ಅನುಭವಿಸಬೇಕಾಗಿದೆ. ಲೋಕಾಯುಕ್ತ ಇನ್‌ಸ್ಪೆಕ್ಟರ್ ಆಗಿದ್ದ ಪ್ರಸನ್ನ ವಿ.ರಾಜು ದೂರು ನೀಡಿದ್ದು, ಲೋಕಾಯುಕ್ತ ಡಿವೈಎಸ್ಪಿ ಆಗಿದ್ದ ಸದಾನಂದ ವರ್ಣೇಕರ್ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

- Advertisement -
spot_img

Latest News

error: Content is protected !!