Tuesday, May 7, 2024
Homeತಾಜಾ ಸುದ್ದಿಮಾರ್ಚ್, ಏಪ್ರಿಲ್ ನಲ್ಲಿ ಸರ್ಕಾರಿ ಕಾಲೇಜು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ

ಮಾರ್ಚ್, ಏಪ್ರಿಲ್ ನಲ್ಲಿ ಸರ್ಕಾರಿ ಕಾಲೇಜು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ

spot_img
- Advertisement -
- Advertisement -

ಬೆಂಗಳೂರು: ಸರಕಾರಿ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು ನಡೆಸಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಲ್ಲೇ ಈ ವರ್ಗಾವಣೆ ಪ್ರಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ.

ಈ ಪ್ರಕ್ರಿಯೆ ಕೂಡ ಕೌನ್ಸೆಲಿಂಗ್ ಮೂಲಕವೇ ನಡೆಯಲಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಮೂಲಕ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಪ್ರಕಟಿಸಿದ್ದಾರೆ.

ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಗೆ ಕೆಎಟಿ ತಡೆಯಾಜ್ಞೆ ನೀಡಿದ್ದರಿಂದ ನನೆಗುದಿಗೆ ಬಿದ್ದಿತ್ತು. ಈಗ ಈ ತಡೆಯಾಜ್ಞೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.‌ ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಮತ್ತೆ ವರ್ಗಾವಣೆ ಪ್ರಕ್ರಿಯೆ ನಡೆಸಲು ಮುಂದಾಗಿದೆ.

- Advertisement -
spot_img

Latest News

error: Content is protected !!