Saturday, April 27, 2024
Homeಕರಾವಳಿಅನಾರೋಗ್ಯ ಹಿನ್ನೆಲೆ ಕಾರ್ಕಳದಲ್ಲಿ ದಂಪತಿ ಆತ್ಮಹತ್ಯೆಗೆ ಶರಣು

ಅನಾರೋಗ್ಯ ಹಿನ್ನೆಲೆ ಕಾರ್ಕಳದಲ್ಲಿ ದಂಪತಿ ಆತ್ಮಹತ್ಯೆಗೆ ಶರಣು

spot_img
- Advertisement -
- Advertisement -

ಉಡುಪಿ: ಅನಾರೋಗ್ಯದ ಹಿನ್ನೆಲೆ ಮನನೊಂದು ಹಿರಿಯ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿ ಕೆ.ಪಿ.ಅನಂತ ಪ್ರಭು ,ಪತ್ನಿ ಪದ್ಮಾ ಪ್ರಭು ಮೃತ ದುರ್ದೈವಿಗಳು.


ಪದ್ಮಾ ಪ್ರಭು ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಮನನೊಂದು ಪತಿ ಪತ್ನಿ ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದರು, ಇಬ್ಬರನ್ನೂ ಮಂಗಳೂರು ಕೆಎಂಸಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!