Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ದಂಪತಿ ಆತ್ಮಹತ್ಯೆ

ಬೆಳ್ತಂಗಡಿ: ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ದಂಪತಿ ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ: ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ.ಉರ್ದು ಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ (63) ಬೇಬಿ (46)  ಮೃತ ದುರ್ದೈವಿಗಳು.

ದಂಪತಿ ಮನೆಯ ಸಮೀಪ ಕಾಡಿನಲ್ಲಿ ಸೆ.19 ರಂದು ಗುರುವಾರ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ನೋಣಯ್ಯ ಪೂಜಾರಿ ಕಳೆದ ಐದು ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ.ಅವರ ಪತ್ನಿ ಬೇಬಿ ಮಕ್ಕಳಿಲ್ಲದ ಕೊರಗನಲ್ಲಿದ್ದರು ಎನ್ನಲಾಗುತ್ತಿದೆ.

ನೋಣಯ್ಯ ಪೂಜಾರಿಗೆ ಇದು ಎರಡನೇ ಮದುವೆ. ಹಿಂದಿನ ಪತ್ನಿ ಕಳೆದ ಹತ್ತು ವರ್ಷದ ಹಿಂದೆ ಸಾವನ್ನಪ್ರಿದ್ದರು . ಬಳಿಕ ಬೇಬಿ ಅವರನ್ನು ವಿವಾಹವಾಗಿದ್ದರು.ಮೊದಲನೆ ಪತ್ನಿಗೆ ಐದು ಗಂಡು ಮಕ್ಕಳಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Latest News

error: Content is protected !!