- Advertisement -
- Advertisement -
ಕೊಡಗು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕೆರೆಗೆ ಬಿದ್ದು ದಂಪತಿ ಹಾಗೂ ಅವರ ನಾಲ್ಕು ವರ್ಷದ ಮಗು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸಿದ್ದಾಪುರ ಸಮೀಪದ ಬಾಣಂಗಾಲದಲ್ಲಿ ನಡೆದಿದೆ.
ಮೃತರನ್ನು ಸಿದ್ದಾಪುರ ಹೈಸ್ಕೂಲ್ ಪೈಸರಿ ನಿವಾಸಿಗಳಾದ ವಿಜೇಶ್ (36), ಅವರ ಪತ್ನಿ ಪಮಿತ (34) ಹಾಗೂ ಪುತ್ರಿ ಲಿಯಾ (4) ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ ಸಿದ್ದಾಪುರದಿಂದ ಬಾಣಂಗಾಲ ಗ್ರಾಮಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಾರು ಕೆರೆಗೆ ಬಿದ್ದಿರುವುದನ್ನು ಬುಧವಾರ ತೋಟದ ಕಾರ್ಮಿಕರು ಗಮನಿಸಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಕಾರನ್ನು ಹೊರತೆಗೆದು ಪರಿಶೀಲಿಸಿದಾಗ ಅದರೊಳಗೆ ಮೂವರ ಮೃತದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ಕೈಗೊಂಡಿದ್ದಾರೆ.
- Advertisement -


