Sunday, June 7, 2026
Homeಅಪರಾಧಉಡುಪಿ: ಪ್ರೇಯಸಿಗೆ ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

ಉಡುಪಿ: ಪ್ರೇಯಸಿಗೆ ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

- Advertisement -
- Advertisement -

ಉಡುಪಿ: ಜೋಡಿಯೊಂದು ತಾವೇ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿಯ ಹೊರವಲಯದ ಸಂತೆಕಟ್ಟೆ ಬಳಿಯ ಆಶೀರ್ವಾದ ಚಿತ್ರಮಂದಿರ ಬಳಿ ಇಂದು ಸಂಜೆ ನಡೆದಿದೆ.

ಬೈಕ್ ನಲ್ಲಿ ಬಂದಿದ್ದ ಈ ಜೋಡಿ ಮಾತಾಡುತ್ತಲೇ ವಾಗ್ವಾದಕ್ಕಿಳಿದಿದ್ದು, ನೋಡು ನೋಡುತ್ತಿದ್ದಂತೆ ಚೂರಿಯಲ್ಲಿ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಹೇಳಲಾಗಿದೆ.

ಮೊದಲಿಗೆ ಪ್ರಿಯಕರ ತನ್ನ ಪ್ರೇಯಸಿಗೆ ಚೂರಿ ಇರಿದು ಬಳಿಕ ತಾನೂ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಸದ್ಯ ಇಬ್ಬರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿ ಕಕ್ಕುಂಜೆಯ ನಿವಾಸಿ ಎಂದು ತಿಳಿದು ಬಂದಿದೆ.

ಸ್ಥಳದಲ್ಲಿ ಚೂರಿ ಪತ್ತೆಯಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರನ್ನು ಸ್ಥಳಿಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!