Friday, June 5, 2026
Homeಕರಾವಳಿಇಬ್ಬರು ಪುತ್ರಿಯರ ಮೇಲೆ ತಂದೆ ಅತ್ಯಾಚಾರವೆಸಗಿದ್ದಾರೆಂಬ ಆರೋಪ ಪ್ರಕರಣ; ಆರೋಪಿಯನ್ನು ದೋಷಮುಕ್ತಗೊಳಿಸಿದ ನ್ಯಾಯಾಲಯ

ಇಬ್ಬರು ಪುತ್ರಿಯರ ಮೇಲೆ ತಂದೆ ಅತ್ಯಾಚಾರವೆಸಗಿದ್ದಾರೆಂಬ ಆರೋಪ ಪ್ರಕರಣ; ಆರೋಪಿಯನ್ನು ದೋಷಮುಕ್ತಗೊಳಿಸಿದ ನ್ಯಾಯಾಲಯ

- Advertisement -
- Advertisement -

ಮಂಗಳೂರು: ಇಬ್ಬರು ಪುತ್ರಿಯರ ಮೇಲೆ ತಂದೆಯೊಬ್ಬರು ಅತ್ಯಾಚಾರವೆಸಗಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಮಂಗಳೂರು ಪೊಕ್ಸೊ ನ್ಯಾಯಾಲಯ ಆರೋಪಿಯನ್ನು ದೋಷಮುಕ್ತಗೊಳಿಸಿದೆ. ಕಾಟಿಪಳ್ಳದ ನಿವಾಸಿ ಅಬ್ದುಲ್ ಹಕೀಂ ಈ ಪ್ರಕರಣದಲ್ಲಿ ದೋಷಮುಕ್ತಗೊಂಡ ವ್ಯಕ್ತಿ.

2021ರ ಜೂನ್‌ನಲ್ಲಿ ತಾವು ಅಪ್ರಾಪ್ತರಾಗಿದ್ದ ಸಂದರ್ಭದಲ್ಲಿ ನಮ್ಮ ತಂದೆ ಅಬ್ದುಲ್ ಹಕೀಂ ಅತ್ಯಾಚಾರ ಎಸಗಿದ್ದರೆಂದು ಇಬ್ಬರು ಹೆಣ್ಣು ಮಕ್ಕಳು ಆರೋಪಿಸಿದ್ದರು. ಪ್ರಕರಣದ ಕುರಿತು ನಗರದ ಮಹಿಳಾ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ಪೊಕ್ಸೊ ಕಾಯ್ದೆಯಡಿ ದಾಖಲಾಗಿದ್ದವು.ತನ್ನ ತಂದೆ ಸತತ ಮೂರು ವರ್ಷಗಳಿಂದ ಅತ್ಯಾಚಾರ ಮಾಡಿದ್ದರು ಎಂದು ಆರೋಪಿಯ ಕಿರಿಯ ಮಗಳು ಆರೋಪಿಸಿದ್ದಳು. ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ಎರಡನೇ ಎಫ್‌ಟಿಎಸ್‌ಸಿ ಪೊಕ್ಸೊ ನ್ಯಾಯಾಲಯ ಪ್ರಕರಣದಲ್ಲಿ ಆರೋಪಿಯ ಮೇಲೆ ಆರೋಪ ಸಾಬೀತು ಮಾಡಲು ಸರಿಯಾದ ಸಾಕ್ಷ್ಯಾಧಾರಗಳು ಇಲ್ಲ ಎಂದು ನಿರ್ಧರಿಸಿತು.

ಅದರಂತೆ ನ್ಯಾಯಾಧೀಶ ಕೆ.ಎಂ ರಾಧಾಕೃಷ್ಣ ಆರೋಪಿಯನ್ನು ಬಿಡುಗಡೆ ಮಾಡಲು ಆದೇಶ ಮಾಡಿದ್ದಾರೆ. ಆರೋಪಿ ಕಳೆದ ಒಂದೂವರೆ ವರ್ಷಗಳಿಂದ ಜೈಲುವಾಸ ಅನುಭವಿಸಿದ್ದರು.

- Advertisement -

Latest News

error: Content is protected !!