Tuesday, May 21, 2024
Homeತಾಜಾ ಸುದ್ದಿಮಾಧ್ಯಮಗಳ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ನಟಿ ಶಿಲ್ಪಾ ಶೆಟ್ಟಿ; ಪೊಲೀಸ್ ಮೂಲಗಳನ್ನು ಆಧರಿಸಿದ ವರದಿ ಮಾನಹಾನಿಕಾರಕವಲ್ಲ...

ಮಾಧ್ಯಮಗಳ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ನಟಿ ಶಿಲ್ಪಾ ಶೆಟ್ಟಿ; ಪೊಲೀಸ್ ಮೂಲಗಳನ್ನು ಆಧರಿಸಿದ ವರದಿ ಮಾನಹಾನಿಕಾರಕವಲ್ಲ ಎಂದ ಬಾಂಬೆ ಹೈಕೋರ್ಟ್

spot_img
- Advertisement -
- Advertisement -


ಮುಂಬೈ: ಇತ್ತೀಚಿಗಷ್ಟೇ ಮಾಧ್ಯಮದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ನಟಿ ಶಿಲ್ಪಾ ಶೆಟ್ಟಿಗೆ ಬಾಂಬೆ ಹೈಕೋರ್ಟ್ ನಲ್ಲಿ ಭಾರಿ ಹಿನ್ನಡೆಯಾಗಿದೆ.ಶಿಲ್ಪಾ ಶೆಟ್ಟಿ ವಿರುದ್ಧ ಮಾಧ್ಯಮದವರು ಮಾಡುತ್ತಿರುವ ವರದಿಗಾರಿಕೆಯ ಮೇಲೆ ತಡೆ ವಿಧಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. ಈ ರೀತಿ ಮಾಡುವುದರಿಂದ ಮಾಧ್ಯಮಗಳ ಸ್ವಾತಂತ್ರ್ಯದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ನ್ಯಾಯಾಲಯ ಹೇಳಿದೆ.

ಪತಿ ರಾಜ್‌ ಕುಂದ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಕುರಿತು ಸುಳ್ಳು ಮತ್ತು ಚಾರಿತ್ರ್ಯ ಹರಣ ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿದೆ. ಜತೆಗೆ ಶಿಲ್ಪಾ ಅಳುತ್ತಿದ್ದಾರೆ, ಗಂಡನ ಜತೆ ಜಗಳವಾಡುತ್ತಿದ್ದಾರೆ ಇತ್ಯಾದಿಯಾಗಿ ಮಾನಹಾನಿಯಾಗುವಂಥ ಸುದ್ದಿಗಳನ್ನು ಬಿತ್ತರಿಸುತ್ತಿದ್ದಾರೆ, ನಾನು ಅಳುವ ಫೋಟೋಗಳನ್ನು ಹಾಕುತ್ತಿದ್ದಾರೆ. ಆದ್ದರಿಂದ ನನ್ನ ಮಾನಹಾನಿಯಾಗಿದ್ದು 25 ಕೋಟಿ ರೂಪಾಯಿ ಪರಿಹಾರ ಬೇಕು ಎಂದು ಶಿಲ್ಪಾ ಶೆಟ್ಟಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, “ನಾವು ಕುಳಿತುಕೊಂಡು ಪ್ರತಿಯೊಂದು ವರದಿಗಳಿಗೂ ಮಾಧ್ಯಮ ಸಂಸ್ಥೆಗಳು ಯಾವ ಮೂಲಗಳನ್ನು ಉಲ್ಲೇಖಿಸುತ್ತಿವೆ ಎಂದು ಪರಿಶೀಲಿಸಬೇಕು ಎಂದು ನೀವು ಬಯಸುತ್ತೀರಾ?” ಎಂದು ನ್ಯಾಯಾಲಯ ಶಿಲ್ಪಾ ಶೆಟ್ಟಿ ಅವರ ವಕೀಲರಿಗೆ ಪ್ರಶ್ನಿಸಿದೆ.

ನೀವು ವ್ಯಕ್ತಿಗತವಾದ ಮಾನಹಾನಿ ವಿಷಯಗಳ ಬಗ್ಗೆ ಹೇಳಿ ನಾನು ಅದನ್ನು ಪರಿಶೀಲಿಸುತ್ತೇನೆ. ಆದರೆ ಪೊಲೀಸ್ ಮೂಲಗಳನ್ನು ಆಧರಿಸಿದ ಸುದ್ದಿ ವರದಿಗಳು ದುರುದ್ದೇಶಪೂರಿತ ಮತ್ತು ಮಾನಹಾನಿಕರ ಎಂದು ಕರೆಯಲಾಗುವುದಿಲ್ಲ. ನಾನು ಏನು ಮಾಡಬೇಕೆಂದು ನೀವು ನಿರೀಕ್ಷಿಸುತ್ತಿದ್ದೀರಿ ಎಂಬುದು ಇದು ಪತ್ರಿಕಾ ಸ್ವಾತಂತ್ರ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದಿದ್ದಾರೆ.

ನೀವು ಸಾರ್ವಜನಿಕ ಜೀವನದಲ್ಲಿದ್ದರೆ ಇಂತಹ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಜನರು ನಿಮ್ಮ ಜೀವನದ ಬಗ್ಗೆ ಆಸಕ್ತರಾಗಿರುತ್ತಾರೆ. ಅವರು ಅಳುತ್ತಾರೆ ಮತ್ತು ತಮ್ಮ ಗಂಡನೊಂದಿಗೆ ಜಗಳವಾಡಿದ್ದಾರೆ ಎಂದು ಬರೆದಿದ್ದು ಹೇಗೆ ಮಾನಹಾನಿಯಾಗುತ್ತದೆ? ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಸುಮಾರು 25 ಕೋಟಿ ರೂ ಮಾನ ಹಾನಿ ಪ್ರಕರಣ ದಾಖಲಿಸಿರುವ ಶಿಲ್ಪಾ ಶೆಟ್ಟಿ, ಹಲವು ಮಾಧ್ಯಮ ಸಂಸ್ಥೆಗಳು ಹಾಗೂ ಗೂಗಲ್, ಫೇಸ್ ಬುಕ್, ಯು ಟ್ಯೂಬ್ ಗಳಂತಹ ಸಾಮಾಜಿಕ ಮಾಧ್ಯಮ ತಾಣಗಳು ತಮಗೆ ಹಾಗೂ ತಮ್ಮ ಪ್ರತಿಷ್ಠೆಗೆ ಹಾನಿ ತಲುಪಿಸಿದೆ ಎಂದು ಹೇಳಲಾಗಿದೆ. ಈ ಎಲ್ಲಾ ಮಾಧ್ಯಮಗಳಿಂದ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ವಿರುದ್ಧ ಇರುವ ಮತ್ತು ಮಾನಹಾನಿ ತರುವ ಕಂಟೆಂಟ್ ಅನ್ನು ತೆಗೆದುಹಾಕಲು ಸೂಚಿಸಬೇಕು ಎಂದು ಶಿಲ್ಪಾ ಕೋರಿದ್ದರು.

ಆದರೆ, ಗೂಗಲ್ , ಯು ಟ್ಯೂಬ್ ಮತ್ತು ಫೇಸ್ಬುಕ್ ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳ ಸಂಪಾದಕೀಯ ವಿಷಯದ ಮೇಲೆ ನಿಯಂತ್ರಣವನ್ನು ಕೋರುವ ನಿಮ್ಮ ವಿನಂತಿಯು ಅಪಾಯಕಾರಿಯಾಗಿದೆ” ಎಂದು ನ್ಯಾಯಾಲಯ ಶಿಲ್ಪಾಗೆ ಹೇಳಿದೆ. ಆದರೆ, ಈ ಪ್ರಕರಣದಲ್ಲಿರುವ ಎಲ್ಲ ಪ್ರತಿವಾದಿಗಳಿಗೆ ತಮ್ಮ ಅಫಿಡವಿಟ್ ಸಲ್ಲಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದ್ದು, ಮುಂದಿನ ವಿಚಾರಣೆಗ ಸೆಪ್ಟೆಂಬರ್ 20 ಕ್ಕೆ ಮುಂದೂಡಿಸಲಾಗಿದೆ.

- Advertisement -
spot_img

Latest News

error: Content is protected !!