Sunday, April 28, 2024
Homeಕರಾವಳಿಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್.ಆರ್. ರಂಗನಾಥ್ ಹಾಗೂ ಹಿರಿಯ ನಿರೂಪಕ ಅರುಣ್ ಬಡಿಗೇರ್ ಗೆ ಸಂಕಷ್ಟ:...

ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್.ಆರ್. ರಂಗನಾಥ್ ಹಾಗೂ ಹಿರಿಯ ನಿರೂಪಕ ಅರುಣ್ ಬಡಿಗೇರ್ ಗೆ ಸಂಕಷ್ಟ: ಇಬ್ಬರ ವಿರುದ್ಧ ಜಾಮೀನುರಹಿತ ಕೇಸ್ ದಾಖಲಿಸಲು ಕೋರ್ಟ್ ಆದೇಶ

spot_img
- Advertisement -
- Advertisement -

ಬೆಂಗಳೂರು : ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್ . ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಜಾಮೀನುರಹಿತ ಕೇಸ್ ದಾಖಲಿಸಲು ಪೊಲೀಸರಿಗೆ ಕೋರ್ಟ್ ಸೂಚಿಸಿದೆ.

ಫೆಬ್ರವರಿ 3ರಂದು ಪಬ್ಲಿಕ್ ಟಿವಿ ವಾಹಿನಿಯು ವಿದ್ಯಾದೇಗುಲದಲ್ಲಿ ಧರ್ಮ ಯುದ್ಧ ಬಿಗ್ ಬುಲೆಟಿನ್ ಎಂಬ ಶೀರ್ಷಿಕೆಯಡಿಯಲ್ಲಿ ಪ್ರಸಾರವಾದ ಕಾರ್ಯಕ್ರಮದಲ್ಲಿ ಮುಖ್ಯಸ್ಥ ಎಚ್ ಆರ್. ರಂಗನಾಥ್ ಹಾಗೂ ಹಿರಿಯ ನಿರೂಪಕ ಅರುಣ್ ಬಡಿಗೇರ್ ‘ಇದು ಭಾರತ. ಭಾರತ ಸೃಷ್ಟಿಯಾಗಿದ್ದೇ ಹಿಂದೂ ರಾಷ್ಟ್ರದ ಆಧಾರದಲ್ಲಿ’ ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆ ಮೂಲಕ ಅವರು ಮುಸ್ಲಿಂ ಭಾವನೆಗಳಿಗೆ ಧಕ್ಕೆ ತರಲು ಪ್ರಯತ್ನಿಸಿದ್ದಾರೆ. ದೇಶದ ಸಮಗ್ರತೆಯ ವಿರುದ್ಧ ಪೂರ್ವಗ್ರಹ ಪೀಡಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇದರ ವಿರುದ್ಧ ಬಂದೇನವಾಜ್ ಗೋಗಿ ಅವರು ಶಹಾಪುರದ ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ದೂರುದಾರರ ಪರ ವಕೀಲ ಮುಹಮ್ಮದ್ ಗೌಸ್ ಅವರ ವಾದವನ್ನು ಪರಿಗಣಿಸಿದ ನ್ಯಾಯಾಲಯವು ಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ರಂಗನಾಥ್ ಮತ್ತು ನಿರೂಪಕ ಅರುಣ್ ಬಡಿಗೇರ ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಕಲಂ 153(ಬಿ) 505(1)(ಬಿ)(ಸಿ) ಮತ್ತು 505(2) ಐಪಿಸಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡಿದೆ.

- Advertisement -
spot_img

Latest News

error: Content is protected !!