Friday, June 5, 2026
Homeತಾಜಾ ಸುದ್ದಿ'ಮಾದಕ' ನಟಿ ರಾಗಿಣಿ ಮತ್ತೆ 5 ದಿನ ಸಿಸಿಬಿ ಪೊಲೀಸ್ ಕಸ್ಟಡಿಗೆ

‘ಮಾದಕ’ ನಟಿ ರಾಗಿಣಿ ಮತ್ತೆ 5 ದಿನ ಸಿಸಿಬಿ ಪೊಲೀಸ್ ಕಸ್ಟಡಿಗೆ

- Advertisement -
- Advertisement -

ಬೆಂಗಳೂರು: ಸ್ಯಾಂಡಲ್​ವುಡ್​ನ ‘ಮಾದಕ’ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ ಐದು ದಿನ ಸಿಸಿಬಿ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

ಡ್ರಗ್ಸ್​ ಮಾಫಿಯಾದಲ್ಲಿ ಕನ್ನಡ ಸಿನಿಮಾ ನಟ-ನಟಿಯರಿಗೆ ನಂಟಿದೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಪಟ್ಟಿರುವ ರಾಗಿಣಿ ದ್ವಿವೇದಿ ಅವರು ಮಹಿಳಾ ಸಾಂತ್ವಾನ ಕೇಂದ್ರದಲ್ಲಿದ್ದು, ಅಲ್ಲಿಂದಲೇ ವಿಡಿಯೋ ಕಾನರೆನ್ಸ್ ಮೂಲಕ ವಿಚಾರಣೆ ನಡೆಸಿದ 1ನೇ ಎಸಿಎಂಎಂ ಕೋರ್ಟಿನ ನ್ಯಾಯಾಧೀಶ ಜಗದೀಶ್​ ಅವರು ಸೆ.11ರವರೆಗೂ ರಾಗಿಣಿ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲು ಆದೇಶಿಸಿದರು.

ಡ್ರಗ್ಸ್ ಪ್ರಕರಣ ತೀವ್ರ ಗಂಭೀರವಾಗಿದ್ದು, ರಾಗಿಣಿ ಅವರನ್ನು ಮತ್ತಷ್ಟು ವಿಚಾರಣೆ ಮಾಡುವ ಅಗತ್ಯವಿದೆ. ಇನ್ನು ಕೆಲವು ದಿನಗಳ ಕಾಲ ನಮ್ಮ ವಶಕ್ಕೆ ನೀಡಬೇಕೆಂದು ಸಿಸಿಬಿ ಅಕಾರಿಗಳು, ನ್ಯಾಯಾೀಶರ ಮುಂದೆ ಮಾಡಿದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ 5 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.

- Advertisement -

Latest News

error: Content is protected !!