Saturday, June 6, 2026
Homeತಾಜಾ ಸುದ್ದಿಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಸಿಎಂ ಯಡಿಯೂರಪ್ಪಗೆ ಸಮನ್ಸ್

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಸಿಎಂ ಯಡಿಯೂರಪ್ಪಗೆ ಸಮನ್ಸ್

- Advertisement -
- Advertisement -

ಬೆಳಗಾವಿ: ಗೋಕಾಕ ಉಪಚುನಾವಣೆ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್‌ 1ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಗೋಕಾಕ ಪ್ರಧಾನ ಜೆಎಂಎಫ್‌ ನ್ಯಾಯಾಲಯ ಸಮನ್ಸ್‌ ಜಾರಿಗೊಳಿಸಿದೆ.
ಕಳೆದ ವರ್ಷ ನವೆಂಬರ್ 23 ರಂದು ವಾಲ್ಮೀಕಿ ಸ್ಟೇಡಿಯಂ ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಯಡಿಯೂರಪ್ಪ ಅವರು, ವೀರಶೈವ-ಲಿಂಗಾಯತ ಸಮುದಾಯದ ಮತದಾರರಿಗೆ ತಮ್ಮ ಮತಗಳು ವಿಭಜನೆಯಾಗದಂತೆ ನೋಡಿಕೊಳ್ಳಬೇಕೆಂದು ಹೇಳಿದ್ದರು. ಗೋಕಾಕ್‌ನಲ್ಲಿ ಲಿಂಗಾಯತ-ವೀರಶೈವ ಪ್ರಬಲ ಸಮುದಾಯಗಳಾಗಿದ್ದು, ವೀರಶೈವ ಮತದಾರರನ್ನು ಬಲಪಡಿಸುವ ಯತ್ನ ನಡೆಸಿದ್ದರು ಎಂಬ ಆರೋಪಗಳು ಕೇಳಿ ಬಂದಿದ್ದವು.
ಪ್ರಕರಣದ ತನಿಖಾ ಅಧಿಕಾರಿಗಳು ಗೋಕಾಕ್ ಟೌನ್ ಪೊಲೀಸ್ ಠಾಣೆಯಿಂದ ಪ್ರಕರಣವನ್ನು ವಜಾಗೊಳಿಸಲು ನ್ಯಾಯಾಲಯದಲ್ಲಿ ಬಿ-ವರದಿ ಸಲ್ಲಿಸಿದ್ದರು. ಆದರೆ, ಇದನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಮುಖ್ಯಮಂತ್ರಿಗಳಿಗ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!