Friday, June 5, 2026
Homeಕರಾವಳಿಉಡುಪಿಉಡುಪಿ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಪ್ರಕರಣ; ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಪ್ರಕರಣ; ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

- Advertisement -
- Advertisement -

ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ ನೀಡಿದೆ.

ಕಿನ್ನಿಗೋಳಿಯ ನಿವಾಸಿ, ಖಾಸಗಿ ಬಸ್‌ ಚಾಲಕ ಅವಿಲ್‌ ಸುಧೀರ್‌ ಕೊರೆಯಾ ಎಂಬಾತ ಕಾರ್ಕಳದಲ್ಲಿ ನರ್ಸ್‌ ವೃತ್ತಿ ಮಾಡಿಕೊಂಡಿದ್ದ ಯುವತಿಯನ್ನು ಪ್ರೀತಿಸುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದ. ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಬಗ್ಗೆ ಉಡುಪಿಯ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಪೊಲೀಸರು ಸಲ್ಲಿಸಿದ ಆರೋಪ ಪಟ್ಟಿಯಂತೆ ವಿಚಾರಣೆ ನಡೆದು ಆರೋಪಿಯು ನೊಂದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿಲ್ಲ ಇದೊಂದು ಸಮ್ಮತಿಯ ಲೈಂಗಿಕ ಸಂಪರ್ಕ ಪ್ರಕರಣವಾಗಿದೆ ಎಂದು ಮನಗೊಂಡು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ (ಪೋಕ್ಸೋ) ಶ್ರೀನಿವಾಸ ಸುವರ್ಣ ಅವರು ಆರೋಪಿಯನ್ನು ಎಲ್ಲ ಆರೋಪಗಳಿಂದ ಮುಕ್ತಗೊಳಿಸಿ ಆದೇಶಿಸಿದ್ದಾರೆ.

- Advertisement -

Latest News

error: Content is protected !!