Friday, June 27, 2025
Homeತಾಜಾ ಸುದ್ದಿಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ

spot_img
- Advertisement -
- Advertisement -

ಬೆಂಗಳೂರು; ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬೆಂಗಳೂರಿನ ತಿಲಕ್ ನಗರ ಪೊಲೀಸರಿಗೆ ಆದೇಶ ನೀಡಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಚುನಾವಣಾ ಬಾಂಡ್​​​ ಗಳ ಮೂಲಕ ಬೆದರಿಸಿ ಹಣವನ್ನು ಸುಲಿಗೆ ಮಾಡಿದ್ದಾರೆ. ಹೀಗಾಗಿ ನಿರ್ಮಲಾ ಸೀತಾರಾಮನ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. FIR ದಾಖಲಿಸಬೇಕು ಎಂದು ಜನಾಧಿಕಾರ ಸಂಘರ್ಷ ಪರಿಷತ್ತ್​ ನ ಆದರ್ಶ್ ಅಯ್ಯರ್ ಎಂಬುವವರು ಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು.

ಈ ಅರ್ಜಿಯ ವಿಚಾರಣೆ ಇಂದು ನಡೆಸಿರುವ ಕೋರ್ಟ್ FIR ದಾಖಲಿಸಿ ಎಂದು ಬೆಂಗಳೂರಿನ ತಿಲಕ್ ನಗರದ ಪೊಲೀಸರಿಗೆ ಆದೇಶಿಸಿದೆ. ಅಲ್ಲದೇ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಅ.10ಕ್ಕೆ ಕೋರ್ಟ್​ ಮುಂದೂಡಿದೆ .

- Advertisement -
spot_img

Latest News

error: Content is protected !!