ಪುತ್ತೂರು; ತಾಯಿಯನ್ನು ಕೊಲೆಗೈದ ಆರೋಪಿಯೊಬ್ಬನಿಗೆ ಕೋರ್ಟ್ ಐದು ವರ್ಷ ಶಿಕ್ಷೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಗೋಪಾಲ ಶಿಕ್ಷೆಗೊಳಗಾದ ಆರೋಪಿ.
ದಿನಾಂಕ 19 2 2019 ರಂದು ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಕಾಯಿಮಣ ಗ್ರಾಮದ ಅಂಕಜಾಲು ಎಂಬಲ್ಲಿ, ಆರೋಪಿ ಗೋಪಾಲ@ ಗೋಪ ಎಂಬಾತ ಕ್ಷುಲ್ಲಕ ಕಾರಣಕ್ಕೆ ತನ್ನ ತಾಯಿ ಚಿಂಕು ಎಂಬವರಿಗೆ ಹಲ್ಲೆ ನಡೆಸಿ, ಬಳಿಕ ಚಿಕಿತ್ಸೆ ಕೊಡಿಸದ ಪರಿಣಾಮ ಆಕೆಯು ಮೃತಪಟ್ಟಿದ್ದರು. ಆರೋಪಿ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಕಲಂ 304 ಐಪಿಸಿ ರಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಪ್ರಾರಂಭಿಕ ತನಿಖೆ ನಡೆಸಿದ ಬೆಳ್ಳಾರೆ ಠಾಣಾ ಪೊಲೀಸ್ ಉಪನಿರೀಕ್ಷಕರಾಗಿದ್ದ ಈರಯ್ಯ ಡಿಎನ್ ರವರು, ತನಿಖೆ ಮುಂದುವರಿಸಿದ ಆಗಿನ ಸುಳ್ಯ ವೃತ್ತದ ವೃತ್ತ ನಿರೀಕ್ಷಕರಾಗಿದ್ದ ಸತೀಶ್ ಕುಮಾರ್ ಆರ್ ರವರು ತನಿಖೆ ನಡೆಸಿ ಆರೋಪಿಯ ವಿರುದ್ಧ ಸೂಕ್ತ ಸಾಕ್ಷಿಗಳನ್ನು ಕಲೆಹಾಕಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿರುತ್ತಾರೆ. ಸದ್ರಿ ಪ್ರಕರಣದಲ್ಲಿ ಅಭಿಯೋಜನೆಯ ಪರವಾಗಿ ಜಯಂತಿ ಭಟ್ ರವರು ವಿಚಾರಣೆ ನಡೆಸಿ ವಾದ ಮಂಡಿಸಿರುತ್ತಾರೆ. ಪ್ರಸ್ತುತ ಆರೋಪಿತನು ಕೃತ್ಯ ಎಸಗಿರುವುದು ಸಾಬೀತಾಗಿ, ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಇದರ ನ್ಯಾಯಾಧೀಶರಾದ ಸರಿತಾ ಡಿ ರವರು ಆರೋಪಿಗೆ ಐದು ವರ್ಷ ಶಿಕ್ಷೆ ಮತ್ತು 5000 ದಂಡ ದಂಡ ತಪ್ಪಿದಲ್ಲಿ ಮೂರು ತಿಂಗಳ ಸಾಧಾರಣ ಶಿಕ್ಷೆ ವಿಧಿಸಿ ದಿನಾಂಕ 29.04.2025 ರಂದು ತೀರ್ಪು ನೀಡಿರುತ್ತಾರೆ.


