Thursday, June 4, 2026
Homeಕರಾವಳಿದಕ್ಷಿಣಕನ್ನಡದಲ್ಲಿ ಕೊರೊನಾ ಆರ್ಭಟ: ಏರುತ್ತಲೇ ಇದೆ ಸಾವಿನ ಸಂಖ್ಯೆ

ದಕ್ಷಿಣಕನ್ನಡದಲ್ಲಿ ಕೊರೊನಾ ಆರ್ಭಟ: ಏರುತ್ತಲೇ ಇದೆ ಸಾವಿನ ಸಂಖ್ಯೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಸದ್ಯಕ್ಕಂತೂ ಕೊರೊನಾ ಆರ್ಭಟ ಕಡಿಮೆಯಾಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ಇಂದು ಒಂದೇ ದಿನ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ.  ಇಂದು 15 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ 1,024 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ಜಿಲ್ಲೆಯಲ್ಲಿ ಇಂದು 1,006 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯ ಇಂದಿನ‌ ಪಾಸಿಟಿವಿಟಿ ರೇಟ್ 10.07%. ಇಂದು 665  ಮಂದಿ ಜಿಲ್ಲೆಯಲ್ಲಿ  ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದಕ್ಷಿಣಕನ್ನಡಲ್ಲಿ ಒಟ್ಟು 6,931ಪಾಸಿಟಿವ್ ಪ್ರಕರಣಗಳಿದ್ದು, ಇದುವರೆಗೂ ಒಟ್ಟು 87,350 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇದೀಗ ಎಲ್ಲಾ ಕಡೆ ಕೊರೊನಾ ಆರ್ಭಟ ತಣ್ಣಗಾಗುತ್ತಿದ್ದರೆ ದಕ್ಷಿಣಕನ್ನಡದಲ್ಲಿ ಮಾತ್ರ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕ ಮೂಡಿಸಿದೆ.

- Advertisement -

Latest News

error: Content is protected !!