- Advertisement -
- Advertisement -
ಮಂಗಳೂರು, ಎ.17: ಉಪ್ಪಿನಂಗಡಿ ವ್ಯಕ್ತಿಯೊಬ್ಬರಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ.
ಇದರೊಂದಿಗೆ 12 ದಿನಗಳ ಬಳಿಕ ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೋನ ಪ್ರಕರಣ ಪತ್ತೆಯಾದಂತಾಗಿದೆ. ಜಿಲ್ಲೆಯಲ್ಲಿ ಕೊರೋನ ದೃಢಪಟ್ಟ 13ನೇ ಪ್ರಕರಣ ಇದಾಗಿದೆ.
39 ವರ್ಷದ ಈ ವ್ಯಕ್ತಿ ಇತ್ತೀಚೆಗೆ ದಿಲ್ಲಿಗೆ ಪ್ರಯಾಣ ಮಾಡಿರುವ ಹಿನ್ನೆಲೆ ಹೊಂದಿದ್ದಾರೆ ಎಂದು ಹೇಳಲಾಗಿದೆ. ಈ ವ್ಯಕ್ತಿ ಈಗಾಗಲೇ ಹೋಂ ಕ್ವಾರಂಟೈನ್‌ನಲ್ಲಿದ್ದು, ಅವರ ಗಂಟಲ ದ್ರವದ ಪರೀಕ್ಷಾ ವರದಿ ಬಂದಿದ್ದು, ಪಾಸಿಟಿವ್ ಆಗಿದೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಅವರನ್ನು ಇದೀಗ ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನ ದೃಢಪಟ್ಟು ಚಿಕಿತ್ಸೆಯಲ್ಲಿದ್ದ 13 ಮಂದಿಯ ಪೈಕಿ ಒಂಬತ್ತು ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ
- Advertisement -