
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯವರಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದೆ. ಜಿಲ್ಲಾಧಿಕಾರಿಯವರು ಕೆಮ್ಮು, ನೆಗಡಿ ಮತ್ತು ಜ್ವರದಿಂದ ಬಳಲುತ್ತಿದ್ದು ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅಲ್ಲದೇ ಮುಂಜಾಗೃತ ಕ್ರಮವಾಗಿ ಹೋಂ ಕ್ವಾರಂಟೈನ್ನಲ್ಲಿದ್ದರು. ಇಂತಹ ಜಿಲ್ಲಾಧಿಕಾರಿಯವರ ಕೊರೋನಾ ಸೋಂಕು ಪತ್ತೆ ಪರೀಕ್ಷೆಯ ವರದಿ ಬಂದಿದ್ದು, ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ತಿಳಿದು ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೊರೊನಾ ವಾರಿಯರ್ಗಳಲ್ಲಿ ಜಿಲ್ಲಾಧಿಕಾರಿ ಪ್ರಮುಖರು. ವಿದೇಶಗಳಲ್ಲಿ ಸಿಲುಕಿದ್ದ ಕನ್ನಡಿಗರನ್ನು ತಾಯ್ನಾಡಿಗೆ ಕರೆ ತರುವ ಉಸ್ತುವಾರಿ ವಹಿಸಿಕೊಂಡಿದ್ದ ಇವರು, ವಂದೇ ಭಾರತ್ ಮಿಷನ್ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ ಪ್ರಯಾಣಿಕರಿಗೆ ಸರಿಯಾದ ಕ್ವಾರಂಟೈನ್ ವ್ಯವಸ್ಥೆ ಮಾಡಿಕೊಡುವಲ್ಲಿ ಶ್ರಮಿಸಿದ್ದರು.
ಅವರನ್ನು ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಅವರ ಕುಟುಂಬಸ್ಥರನ್ನು ಕ್ವಾರಂಟೈನ್ ಮಾಡಲಾಗಿದೆ.


