Monday, June 8, 2026
Homeತಾಜಾ ಸುದ್ದಿರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಿರುವ ಹಿನ್ನೆಲೆ: ರಾಜ್ಯ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಇಲಾಖೆಯಿಂದ...

ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಿರುವ ಹಿನ್ನೆಲೆ: ರಾಜ್ಯ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಇಲಾಖೆಯಿಂದ ಪತ್ರ

- Advertisement -
- Advertisement -

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಿರುವ ಹಿನ್ನೆಲೆ, ರಾಜ್ಯ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಇಲಾಖೆಗೆ ಪತ್ರ ಬರೆದಿದೆ.

ರಾಜ್ಯ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಗೆ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ.  ಕಳೆದ ಒಂದು ತಿಂಗಳಿನಲ್ಲಿ ಕರ್ನಾಟಕದಲ್ಲಿ ಹೈ ಎವರೇಜ್ ಹೊಸ ಪ್ರಕರಣಗಳು ವರದಿಯಾಗಿವೆ. ದೇಶದ ವಾರದ ಹೊಸ ಪ್ರಕರಣಗಳ ಪೈಕಿ ಕರ್ನಾಟಕದಲ್ಲಿ 10.1% ವರದಿಯಾಗಿದೆ. ಕರ್ನಾಟಕದಲ್ಲಿ ವಾರದ ಪಾಸಿಟಿವಿಟಿ ರೇಟ್ ನಿನ್ನೆ 6.28% ಇತ್ತು. ಈ ಹಿನ್ನೆಲೆ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಸೋಂಕು ಹರದಡಂತೆ ತಡೆಯಲು ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ.

24 ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಜಾಸ್ತಿ ಇದೆ. ಮುಂದಿನ ತಿಂಗಳುಗಳಲ್ಲಿ ಹಬ್ಬಗಳ ಕಾರಣದಿಂದ ಸಾಮೂಹಿಕ ಜನ ಸೇರುವ ಸಂಭವ ಇರುತ್ತದೆ. ಹಾಗಾಗಿ ಎಲ್ಲಾ ಜಿಲ್ಲೆಗಳಲ್ಲಿ ಸರಿಯಾದ ಟೆಸ್ಟಿಂಗ್ ಬಗ್ಗೆ ರಾಜ್ಯ ಗಮನ ಹರಿಸಬೇಕು ಎಂದಿದ್ದಾರೆ. ಹೆಚ್ಚು ಪ್ರಕರಣ ವರದಿಯಾಗುವ ಜಿಲ್ಲೆಗಳು, ಪಾಸಿಟಿವಿಟಿ ರೇಟ್, ಕ್ಲಸ್ಟರ್ ಗಳ ಮೇಲೆ ಸೂಕ್ತ ನಿಗಾ ಇಡಬೇಕು.ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಜೀನೋಮ್ ಸೀಕ್ವೆನ್ಸಿಂಗ್ ಅಗತ್ಯ ಪಾಲಿಸಬೇಕು ಎಂದಿದ್ದಾರೆ.

ಮಾರುಕಟ್ಟೆ, ಅಂತಾರಾಜ್ಯ ಬಸ್ ನಿಲ್ದಾಣಗಳು, ಶಾಲೆಗಳು, ಕಾಲೇಜುಗಳು, ರೈಲ್ವೇ ನಿಲ್ದಾಣಗಳು ಗಳಲ್ಲಿ ಸೂಕ್ತ ಕೋವಿಡ್ ಮಾರ್ಗಸೂಚಿ ಪಾಲನೆಯಾಗುವಂತೆ ನೋಡಿಕೊಳ್ಳೋದರ ಜೊತೆಗೆ ಲಸಿಕೆ ಪ್ರಮಾಣ ಹೆಚ್ಚಳದತ್ತ ಗಮನ ಇರಿಸಬೇಕು ಎಂದು ಪತ್ರದಲ್ಲಿ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

- Advertisement -

Latest News

error: Content is protected !!