Friday, June 5, 2026
Homeಕರಾವಳಿದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ ಸೇರಿ ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ‌ ತಪಾಸಣೆ

ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ ಸೇರಿ ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ‌ ತಪಾಸಣೆ

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸುವ ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ಅನುಸರಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ರಾಜ್ಯದ ಗಡಿಭಾಗಗಳಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಅನುಸರಿಸುವಂತೆ ಗಡಿಭಾಗದ ಎಲ್ಲಾ ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ನಿರ್ದೇಶನ‌ ನೀಡಿದ್ದಾರೆ.‌ ಬೆಂಗಳೂರಿನಲ್ಲಿ ಸೋಮವಾರ ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ ಸೇರಿದಂತೆ ಗಡಿ ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಈ ಸೂಚನೆ ನೀಡಲಾಗಿದೆ.

;;

ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳ ಮೂಲಕ ಕರ್ನಾಟಕ ಪ್ರವೇಶ ಮಾಡುವ ಜನರು ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಆರ್ ಟಿ ಪಿ ಸಿ ಆರ್ ನೆಗೆಟಿವ್ ವರದಿ ನೀಡುವಂತೆ ಸೂಚಿಸಬೇಕು. ಸೋಂಕಿನ ಲಕ್ಷಣ ಕಂಡುಬಂದರೆ ಅಂಥವರ ಗಂಟಲು ದ್ರವ ಪರೀಕ್ಷೆಗೆ ಗಡಿಯಲ್ಲಿ ವ್ಯವಸ್ಥೆ ಮಾಡಿಕೊಳ್ಳಬೇಕು. ಇದಕ್ಕಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಅವರ ಸಹಾಯ ಪಡೆಯಬೇಕು.‌ ಜಿಲ್ಲೆಗಳ ಗಡಿಭಾಗಗಳಲ್ಲಿ ಸೋಂಕಿತರು ಹೊರ ರಾಜ್ಯಗಳಿಂದ ಪ್ರವೇಶಿಸದಂತೆ ಕಟ್ಟೆಚ್ಚರ ವಹಿಸಿ ಎಂದು‌ ಎಸ್ಪಿಗಳಿಗೆ ಗೃಹ ಸಚಿವರು ಸೂಚನೆ ನೀಡಿದ್ದಾರೆ.

ಕಳೆದ ಬಾರಿ ಮಹಾರಾಷ್ಟ್ರ ಮತ್ತು ಕೇರಳದಿಂದಲೇ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ರಾಜ್ಯವನ್ನು ಪ್ರವೇಶ ಮಾಡಿತ್ತು. ಈ ಬಾರಿ ಹಾಗೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಬಸ್ ಪ್ರಯಾಣಿಕರನ್ನು ರ್ಯಾಂಡಮ್ ಆಗಿ ತಪಾಸಣೆ ಮಾಡಬೇಕು ಎಂದು ಕೂಡಾ ಸಲಹೆ ನೀಡಲಾಗಿದೆ. ಬೆಳಗಾವಿ, ಬೀದರ್, ವಿಜಯಪುರ, ಕೊಡಗು, ಮೈಸೂರು, ಚಾಮರಾಜನಗರ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಸೇರಿದಂತೆ ಎಲ್ಲ ಗಡಿ ಜಿಲ್ಲೆಗಳ ಪೊಲೀಸ್ ಮುಖ್ಯಸ್ಥರೊಂದಿಗೆ ಸಂವಾದ ನಡೆಸಲಾಯಿತು.

- Advertisement -

Latest News

error: Content is protected !!