Monday, July 20, 2026
Homeತಾಜಾ ಸುದ್ದಿಕೋವಿಡ್ ಕಾಣಿಸಿಕೊಂಡ ಮಕ್ಕಳ ಕ್ಲಾಸ್ ಸಸ್ಪೆಂಡ್ : ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿಕೆ

ಕೋವಿಡ್ ಕಾಣಿಸಿಕೊಂಡ ಮಕ್ಕಳ ಕ್ಲಾಸ್ ಸಸ್ಪೆಂಡ್ : ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿಕೆ

- Advertisement -
- Advertisement -

ಬೆಂಗಳೂರು: ಕೋವಿಡ್ ಕಾಣಿಸಿಕೊಂಡ ಮಕ್ಕಳ ಕ್ಲಾಸ್ ಸಸ್ಪೆಂಡ್ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ಸುಧಾಕರ್, ಶಾಲಾ ಮಕ್ಕಳಲ್ಲಿ ಕೋವಿಡ್ ಹರಡುವಿಕೆ ಬಗ್ಗೆ ಇನ್ನೂ ಮಾಹಿತಿ ಬಂದಿಲ್ಲ, ಮಾಹಿತಿ ಕ್ರೋಡಿಕರಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಮಕ್ಕಳಿಗೆ ಕೋವಿಡ್ ಬಂದ ತಕ್ಷಣ ಏನು ಆಗುವುದಿಲ್ಲ, ಕಳೆದ ಎರಡು ಮೂರು ತಿಂಗಳಿಂದ ಶಾಲೆಗಳಲ್ಲಿ ಗಮನಿಸುತ್ತಿದ್ದೇವೆ ಎಂದು ಹೇಳಿರುವ ಆರೋಗ್ಯ ಸಚಿವರು, 12 ವರ್ಷ ಮತ್ತು 15 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಷನ್ ಆಗಿದೆಯಾ ಅನ್ನುವುದನ್ನು ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ನಮ್ಮಲ್ಲಿ ಬಿಎ4 ತರಹದ ತಳಿ ಪತ್ತೆ ಆಗಿಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಡಾ. ಸುಧಾಕರ್ ತಿಳಿಸಿದ್ದಾರೆ.

- Advertisement -

Latest News

error: Content is protected !!