Sunday, June 7, 2026
Homeತಾಜಾ ಸುದ್ದಿಬೆಂಗಳೂರಿನಲ್ಲಿ ಕೊರೊನಾ ರಣಕೇಕೆ: ರಾಜ್ಯದಲ್ಲಿ 337 ಸೋಂಕು ದೃಢ

ಬೆಂಗಳೂರಿನಲ್ಲಿ ಕೊರೊನಾ ರಣಕೇಕೆ: ರಾಜ್ಯದಲ್ಲಿ 337 ಸೋಂಕು ದೃಢ

- Advertisement -
- Advertisement -

ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿ ನೂರಕ್ಕೂ ಅಧಿಕ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಂದೇ ದಿನ 337 ಸೋಂಕು ಪ್ರಕರಣಗಳು ದೃಢಪಟ್ಟಿವೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ ರಾಜ್ಯದಲ್ಲಿ ಒಂದೇ ದಿನ 337 ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 8281ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 138, ಸೋಂಕು ದೃಢಪಟ್ಟಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಕಳೆದ ಒಂದು ವಾರದಲ್ಲಿ ರಾಜಧಾನಿಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 844ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 10 ಮಂದಿ ಬಲಿಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 124ಕ್ಕೆ ಏರಿಕೆಯಾಗಿದೆ.

ಕಲಬುರಗಿ 521, ಬಳ್ಳಾರಿ 37, ಹಾಸನ 18, ದ.ಕನ್ನಡ 13, ಯಾದಗಿರಿ 4, ಉಡುಪಿ 11, ಧಾರವಾಡದಲ್ಲಿ 3, ದಾವಣಗೆರೆ 12, ಬೀದರ್ 10, ಮೈಸೂರು 6, ಕೋಲಾರ 4 ಪ್ರಕರಣಗಳು ವರದಿಯಾಗಿವೆ.

- Advertisement -

Latest News

error: Content is protected !!