Tuesday, May 21, 2024
Homeಕರಾವಳಿಉಡುಪಿಕೇರಳ-ಮಹಾರಾಷ್ಟ್ರದ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ!

ಕೇರಳ-ಮಹಾರಾಷ್ಟ್ರದ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ!

spot_img
- Advertisement -
- Advertisement -

ಬೆಂಗಳೂರು: ನೆರೆಯ ಮಹಾರಾಷ್ಟ್ರ ಹಾಗೂ ಕೇರಳದಿಂದ ಆಗಮಿಸುವ ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿರುವ ಆರ್ ಟಿಪಿಸಿಆರ್ ಪರೀಕ್ಷೆ ವರದಿಯನ್ನು ಹೊಂದಿರಬೇಕು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕಳೆದ ಬಾರಿ ಒಂದು ಡೋಸ್ ಪಡೆದಿದ್ದ ಪ್ರಯಾಣಿಕರಿಗೆ ರಿಯಾಯಿತಿ ಕೊಡಲಾಗಿತ್ತು. ಈ ಬಾರಿ ಎರಡು ಡೋಸ್ ಲಸಿಕೆ ಪಡೆದಿದ್ದರೂ, ಕೋವಿಡ್ ನೆಗೆಟಿವಿ ಪ್ರಮಾಣಪತ್ರ ಹೊಂದಿರುವುದನ್ನು ಕಡ್ಡಾಯ ಮಾಡಲಾಗಿದೆ. ರೈಲು ಮತ್ತು ವಿಮಾನದಲ್ಲಿ ಬರುವ ಪ್ರಯಾಣಿಕರಿಗೆ ಆಯಾ ಭಾಗದಲ್ಲಿ ಟಿಕೆಟ್ ದೃಢಪಡಿಸುವ ವೇಳೆಯಲ್ಲೇ ಕೋವಿಡ್ ನೆಗೆಟಿವ್ ವರದಿ ಹೊಂದಿರುವುದನ್ನು ದೃಢಪಡಿಸಿಕೊಳ್ಳಬೇಕು. ರೈಲಿನಲ್ಲಿ ಟಿಕೆಟ್ ಪಡೆದು ಪ್ರಯಾಣಿಸುವವರನ್ನು ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಇರುವುದನ್ನು ದೃಢೀಕರಿಸುವುದು ರೈಲ್ವೇ ಇಲಾಖೆಯ ಜವಾಬ್ದಾರಿಯಾಗಿರುತ್ತದೆ.

ಬಸ್ಸಿನಲ್ಲಿ ಪ್ರಯಾಣಿಸುವ ವೇಳೆ ಪ್ರಯಾಣಿಕರನ್ನು ನೆಗೆಟಿವ್ ರಿಪೋರ್ಟ್ ಹೊಂದಿದ್ದಾರೆಯೇ ಎಂಬುದನ್ನು ಆಯಾ ಬಸ್ಸಿನ ನಿರ್ವಾಹಕರೇ ಖಚಿತಪಡಿಸಿಕೊಳ್ಳಬೇಕು. ಕೇರಳದಿಂದ ಕರ್ನಾಟಕಕ್ಕೆ ವಿದ್ಯಾಭ್ಯಾಸ, ಕಛೇರಿ ಕೆಲಸ, ವ್ಯಾಪಾರ, ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ದೈನಂದಿನವಾಗಿ ಭೇಟಿ ನೀಡುವವರು ಪ್ರತಿ 15 ದಿನಗಳಿಗೊಮ್ಮೆ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕು.

ಕೇರಳದ ಗಡಿ ಭಾಗದಲ್ಲಿರುವ ದಕ್ಷಿಣ ಕನ್ನಡ, ಕೊಡಗು, ಮೈಸೂರು ಜಿಲ್ಲೆಗಳು. ಮಹಾರಾಷ್ಟ್ರ ಗಡಿಯ ಬೆಳಗಾವಿ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳ ವಾಹನಗಳ ಪ್ರಯಾಣಿಕರು, ಚಾಲಕರು, ಸಹಾಯಕರುಗಳನ್ನು ತಪಾಸಣೆಗೊಳಪಡಿಸಲು ಚೆಕ್‍ಪೋಸ್ಟ್‍ಗಳಲ್ಲಿ ಅಗತ್ಯ ಸಿಬ್ಬಂದಿಗಳನ್ನು ನೇಮಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, ಸಾಂವಿಧಾನಿಕ ಕಾರ್ಯಕಾರಿಗಳು, ವೈದ್ಯಕೀಯ ಸಿಬ್ಬಂದಿಗಳು, ಸಂಬಂಧಿಕರು ಮರಣ ಹೊಂದಿದ ಸಂದರ್ಭದಲ್ಲಿ ಆಗಮಿಸುವವರಿಗೆ ಆರ್‍ಟಿಪಿಸಿಆರ್ ನೆಗೆಟೀವ್ ವರದಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

- Advertisement -
spot_img

Latest News

error: Content is protected !!