Sunday, August 30, 2026
Homeಕರಾವಳಿಕೋವಿಡ್ ರೋಗಿ ಸಾವು: ವೆನ್‍ಲಾಕ್ ಆಸ್ಪತ್ರೆಯ ವೈದ್ಯರ ವಿರುದ್ಧ ಆಕ್ರೋಶ

ಕೋವಿಡ್ ರೋಗಿ ಸಾವು: ವೆನ್‍ಲಾಕ್ ಆಸ್ಪತ್ರೆಯ ವೈದ್ಯರ ವಿರುದ್ಧ ಆಕ್ರೋಶ

- Advertisement -
- Advertisement -

ಮಂಗಳೂರು: ಜಿಲ್ಲಾ ಕೋವಿಡ್ ಆಸ್ಪತ್ರೆ ವೆನ್ ಲಾಕ್ ನಲ್ಲಿ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಹಿರಿಯ ಮಹಿಳೆಯೊಬ್ಬರು ಚಿಕಿತ್ಸೆ ಫಕಾರಿಯಾಗದೆ ಸಾವನ್ನಪ್ಪಿದ್ದು, ಈಕೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೆ ಕಾರಣ ಎಂದು ಸಂಬಂಧಿಕರು ಆರೋಪಿಸಿರುವ ಘಟನೆ ನಡೆದಿದೆ.

ವಿಟ್ಲ ಸಮೀಪದ ಸಾಲೆತ್ತೂರು ನಿವಾಸಿ ಭಾರತಿ ರೈ(52) ಮೃತ ಮಹಿಳೆ. ಮೇ 5ರಂದು ಅವರನ್ನು ಪುತ್ತೂರಿನಲ್ಲಿ ತಪಾಸಣೆಗೆ ಒಳಪಡಿಸಿದ್ದು, ಕೊರೊನಾ ಪಾಸಿಟಿವ್ ಆಗಿದ್ದರು. ಪಲ್ಸ್ ರೇಟ್ ಕಡಿಮೆ ಇದ್ದುದರಿಂದ ಮಂಗಳೂರಿಗೆ ಕರೆತಂದು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಮಹಿಳೆಯೋರ್ವಳು ನಿನ್ನೆ ಸಂಜೆ ನಿಧನರಾಗಿದ್ದಾರೆ. ಇವರ ಸಾವಿಗೆ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯ ಎಂದು ಆರೋಪಿಸಿ ಸಂಬಂಧಿಕರು ಗಲಾಟೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಶಾಸಕ ವೇದವ್ಯಾಸ ಕಾಮತ್ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಮೃತರ ಕುಟುಂಬದವರಿಗೆ ಸಾಂತ್ವಾನ ಹೇಳುವ ಮೂಲಕ ಮಾತುಕತೆ ನಡೆಸಿದ್ದಾರೆ. ಹಾಗೂ ವೈದ್ಯರ ಜೊತೆಗೆ ಕೂಡ ಮಾತುಕತೆ ನಡೆಸಿದ್ದಾರೆ.

- Advertisement -

Latest News

error: Content is protected !!