Friday, May 17, 2024
Homeತಾಜಾ ಸುದ್ದಿಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಕೋವಿಡ್ ಪಾಸಿಟಿವ್

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಕೋವಿಡ್ ಪಾಸಿಟಿವ್

spot_img
- Advertisement -
- Advertisement -

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಹೊರಡಿಸಿದ ಸಮನ್ಸ್‌ಗೆ ಹಾಜರಾಗಲು ಕೆಲವೇ ದಿನಗಳು ಇರುವಾಗ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂದು ವರದಿಯಾಗಿದೆ.

ಸೋನಿಯಾ ಗಾಂಧಿ ಜೂನ್ 8 ರಂದು ಇಡಿ ಮುಂದೆ ವಿಚಾರಣೆಗೆ ಹಾಜರಾಗಬೇಕಿತ್ತು. ಈ ನಡುವೆ ಇಂದು ಅವರಿಗೆ ಕೋವಿಡ್ ಸೋಂಕು ತಗುಲಿರುವ ಬಗ್ಗೆ ವರದಿಯಾಗಿದೆ.


ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಈ ಬಗ್ಗೆ ಮಾಹಿತಿ ನೀಡಿದ್ದು, ಸೋನಿಯಾ ಗಾಂಧಿ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದರು. ಬುಧವಾರ ಸಂಜೆ, ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಅವರಲ್ಲಿ ಸೌಮ್ಯ ರೋಗಲಕ್ಷಣಗಳು ಕಂಡು ಬಂದಿವೆ. ಈ ಕಾರಣಕ್ಕೆ ವೈದ್ಯರ ಸಲಹೆ ಮೇರೆಗೆ ಐಸೋಲೇಟ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!