Thursday, April 25, 2024
Homeಕರಾವಳಿಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ಮದುವೆ ಪಾರ್ಟಿ: ಆಯೋಜಕರು ಮತ್ತು ಮಾಲೀಕರ ವಿರುದ್ಧ ಪ್ರಕರಣ

ಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ಮದುವೆ ಪಾರ್ಟಿ: ಆಯೋಜಕರು ಮತ್ತು ಮಾಲೀಕರ ವಿರುದ್ಧ ಪ್ರಕರಣ

spot_img
- Advertisement -
- Advertisement -

ಮಂಗಳೂರು: ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಕುಳಾಯಿ ಶೋರ್ ಬೀಚ್ ಹೌಸ್​ನಲ್ಲಿ ಮದುವೆ ಪಾರ್ಟಿ ನಡೆಸಿದ ಆಯೋಜಕರು ಮತ್ತು ಬೀಚ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರಿನ ಕುಳಾಯಿ ಶೋರ್ ಬೀಚ್ ಹೌಸ್​ನಲ್ಲಿ ನಿನ್ನೆ ರಾತ್ರಿ ಮದುವೆ ಆರತಕ್ಷತೆ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮ ಸಂಬಂಧ ಮಹಾನಗರ ಪಾಲಿಕೆ ವತಿಯಿಂದ ಅನುಮತಿಯನ್ನು ಪಡೆಯಲಾಗಿತ್ತು. ಆದರೆ, ಅನುಮತಿ ಪಡೆದದ್ದಕ್ಕಿಂತ ಹೆಚ್ಚಿನ ಜನರು ಕಾರ್ಯಕ್ರಮದಲ್ಲಿ ಸೇರಿದ್ದರು.

ಈ ಬಗ್ಗೆ ಸ್ಥಳೀಯರ ದೂರಿನ ಮೇರೆಗೆ ಮಂಗಳೂರು ಉಪವಿಭಾಗಾಧಿಕಾರಿ ಮದನ್ ಮೋಹನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅನುಮತಿಯ ನಿಬಂಧನೆಗಳನ್ನು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮದುವೆ ಆಯೋಜಕರು ಮತ್ತು ಬೀಚ್ ಹೌಸ್ ಮಾಲೀಕರ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!