Tuesday, April 30, 2024
Homeಕರಾವಳಿದ.ಕ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ಸ್ಥಿತಿಗತಿ ಪರಿಶೀಲನಾ ಸಭೆ

ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ಸ್ಥಿತಿಗತಿ ಪರಿಶೀಲನಾ ಸಭೆ

spot_img
- Advertisement -
- Advertisement -

ಮಂಗಳೂರು: ಜೆಎನ್ 1 ಆತಂಕದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಪರಿಶೀಲನಾ ಸಭೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ನೇತೃತ್ವವನ್ನು ಆರೋಗ್ಯ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಹಿಸಿದ್ದರು.

ಸಭೆಯ ಬಳಿಕ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದರೆ ಮಾತ್ರ ಲಸಿಕೆ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಮಾಡುವುದಾಗಿ ಹೇಳಿದ್ದಾರೆ.

ಅಲ್ಲದೇ, ಲಸಿಕೆ ಬಗ್ಗೆ ಕೇಂದ್ರ ಸರ್ಕಾರ ಮತ್ತು ಬೇರೆ ರಾಜ್ಯಗಳ ಮಾಹಿತಿ ಪಡೆದು ನಿರ್ಧಾರ ಮಾಡುವುದಾಗಿ ಹೇಳಿರುವ ಆರೋಗ್ಯ ಸಚಿವರು, ಯಾವುದೇ ಕಾರ್ಯಕ್ರಮ ನಿಲ್ಲಿಸುವ ನಿರ್ಧಾರ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಸದ್ಯ ಐದು ಸಾವಿರ ಟೆಸ್ಟಿಂಗ್ ಟಾರ್ಗೆಟ್ ನೀಡಲಾಗಿದ್ದು, ಬೆಂಗಳೂರು ಹೊರತುಪಡಿಸಿದರೆ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಮೈಸೂರಿಗೆ ಹೆಚ್ಚು ನೀಡಲಾಗಿದೆ ಎಂದು ಹೇಳಿರುವ ದಿನೇಶ್ ಗುಂಡೂರಾವ್, ಕ್ರಿಸ್ ಮಸ್, ಹೊಸ ವರ್ಷ ಆಚರಣೆಗೆ ಯಾವುದೇ ಹೊಸ ಮಾರ್ಗಸೂಚಿ ಇಲ್ಲ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!