Saturday, May 4, 2024
Homeಕರಾವಳಿಮಂಗಳೂರು: ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3 ರಿಂದ ...

ಮಂಗಳೂರು: ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3 ರಿಂದ ಕೊರೊನಾ ಲಸಿಕೆ ನೀಡಲಾಗುವುದು- ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.

spot_img
- Advertisement -
- Advertisement -

ಮಂಗಳೂರು: ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ 1,01,549 ಮಕ್ಕಳಿದ್ದು, ಅವರಿಗೆ ಜನವರಿ 3 ರಿಂದ ಕೋವಿಡ್ ಲಸಿಕೆ ನೀಡಲು ಪಟ್ಟಿ ಸಿದ್ದಪಡಿಸಿ, ಶಿಬಿರ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಜಿಲ್ಲಾ ಆರೋಗ್ಯ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಈ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆಯನ್ನು ಮಾತ್ರ ನೀಡಲಾಗುವುದು, ಆಯಾ ಶಾಲಾ ಕಾಲೇಜುಗಳಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ಲಸಿಕಾ ತಂಡದ ಮೂಲಕ ಲಸಿಕೆಯನ್ನು ನೀಡಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರು ಸೂಚಿಸಿದರು.

ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ 1,01,549 ಮಕ್ಕಳಿದ್ದು, ಅವರು ಶಿಕ್ಷಣ ಪಡೆಯುತ್ತಿರುವ ಶಾಲೆಗಳು, ಕಾಲೇಜುಗಳು, ಐಟಿಐಗಳು, ಪಾಲಿಟೆಕ್ನಿಕ್ ಹಾಗೂ ಇತರೆ ಸೇರಿದಂತೆ ಸಂಸ್ಥೆವಾರು ಮಕ್ಕಳ ಪಟ್ಟಿ ಮಾಡಿ ಕ್ರಿಯಾಯೋಜನೆ ತಯಾರಿಸಿ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಕಾರದೊಂದಿಗೆ ಶಿಬಿರಗಳನ್ನು ಆಯೋಜಿಸುವಂತೆ ಅವರು ಸಲಹೆ ನೀಡಿದರು. ಮಕ್ಕಳ ಕೋವಿಡ್ ಲಸಿಕಾಕರಣ ಕುರಿತು ಶಾಲಾ-ಕಾಲೇಜುಗಳಲ್ಲಿ ಪೋಷಕ-ಶಿಕ್ಷಕ ಸಮಿತಿಯ ಸಭೆ ಕರೆದು ಮಾಹಿತಿ ನೀಡುವಂತೆಯೂ ಜಿಲ್ಲಾಧಿಕಾರಿಯವರು ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ರಾಜೇಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಾ. ಮಲ್ಲೆ ಸ್ವಾಮಿ, ಕೋವಿಡ್ ನೋಡಲ್ ಅಧಿಕಾರಿ ಡಾ. ಅಶೋಕ್, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು, ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಇತರರು ಸಭೆಯಲ್ಲಿದ್ದರು.

- Advertisement -
spot_img

Latest News

error: Content is protected !!